ಕರಾವಳಿ

ದ.ಕ.ಜಿಲ್ಲೆಯಲ್ಲಿ ರವಿವಾರ 199 ಮಂದಿಯಲ್ಲಿ ಸೋಂಕು ಪತ್ತೆ : 90 ಮಂದಿ ಗುಣಮುಖ

Pinterest LinkedIn Tumblr

ಮಂಗಳೂರು, ಜುಲೈ. 27 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 199 ಮಂದಿಗೆ ಸೋಂಕು ಧೃಢಪಟ್ಟಿದೆ. ಕಳೆದ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ರವಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 199 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ಮತ್ತೆ ದಿಢೀರ್ ಏರಿಕೆಯಾಗಿದ್ದು, ಶನಿವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4612 ಇತ್ತು. ಆದರೆ ರವಿವಾರ ಮತ್ತೆ 199 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಒಟ್ಟು ಸಂಖ್ಯೆ 4811ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ (83) ದಿಢೀರ್ ಏರಿಕೆಯಾಗಿದೆ.

ರವಿವಾರದಂದು 90 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2217 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನು 2471 ಮಂದಿಗೆ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರವಿವಾರ ಪತ್ತೆಯಾದ ಪ್ರಕರಣಗಳ ಪೈಕಿ 31 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಐ ಎಲ್ ಐ ಪ್ರಕರಣಗಳಾಗಿವೆ. 10 ಸಾರಿ ಪ್ರಕರಣಗಳಾಗಿವೆ. ಇಬ್ಬರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ. 83 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ..

ರವಿವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ಕೂಡಾ ಕೊರೋನಾ ಮಹಾ ಸ್ಫೋಟ

ಜಿಲ್ಲೆಯಲ್ಲಿ ರವಿವಾರ ಬರೋಬ್ಬರಿ 199 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಿಂದ 73 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 83 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 31 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 10 ಮಂದಿಗೆ ಕೊರೋನಾ ಪಾಸಿಟಿವ್

ಅಂತರ್ ರಾಜ್ಯ ಸಂಪರ್ಕ 2

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪಾಸಿಟಿವ್.

Comments are closed.