ಕರಾವಳಿ

ದ.ಕ.ಜಿಲ್ಲೆಯಲ್ಲಿ ಏಳು ಮಂದಿ ಪುರುಷರು, ಒರ್ವ ಮಹಿಳೆ ಸೇರಿ 8 ಮಂದಿ ಕೊರೋನಾಗೆ ಬಲಿ

Pinterest LinkedIn Tumblr

ಮಂಗಳೂರು, ಜುಲೈ.27 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ಒಂದೇ ದಿನ‌ ಕೊರೋನಾ ಸೋಂಕಿಗೆ ಬರೋಬ್ಬರಿ‌ 8 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 123ಕ್ಕೆ ಏರಿಕೆಯಾಗಿದೆ.

ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಸಾವು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕೊರೋನ ಸೋಂಕಿನಿಂದ ಸಾವಿಗೀಡಾದ ಎಂಟು ಮಂದಿಯಲ್ಲಿ ಎಲ್ಲರೂ ಹಿರಿಯ ನಾಗರಿಕರೇ ಆಗಿದ್ದಾರೆ.

ಏಳು ಮಂದಿ ಮಂಗಳೂರು ನಿವಾಸಿಗಳಾಗಿದ್ದರೆ, ಒಬ್ಬರು ಪುತ್ತೂರು ತಾಲೂಕಿನವರು. ಇವರಲ್ಲಿ ಏಳು ಮಂದಿ ಪುರುಷರು, ಒರ್ವ ಮಹಿಳೆ. ಎಲ್ಲರೂ ಖಾಸಗಿ ಆಸ್ಪತ್ರೆಗಳಲ್ಲೇ ಸಾವಿಗೀಡಾಗಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಜಿಲ್ಲಾಡಳಿತ ಸರ್ವ ಕ್ರಮ ಕೈಗೊಂಡಿದೆ.

ಮಂಗಳೂರು ನಿವಾಸಿ 72, 71, 70, 70, 56, 55, 45 ವರ್ಷದವರು. ಪುತ್ತೂರಿನ 55 ವರ್ಷದ ಪುರುಷ ಕೊರೋನ ಸೋಂಕಿನೊಂದಿಗೆ ಇತರ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ರವಿವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ‌ ಹೆಚ್ಚುತ್ತಿರುವ ಕೊರೋನಾ ಸಾವು

ನಿನ್ನೆ ಒಂದೇ ದಿನ ಬರೋಬ್ಬರಿ 8 ಮಂದಿ ಕೊರೋನಾ ಮಹಾಮಾರಿಗೆ ಬಲಿ

ಮಂಗಳೂರಿನ 6 ಗಂಡಸರು,ಓರ್ವ ಮಹಿಳೆ,ಪುತ್ತೂರಿನ ಓರ್ವ ಗಂಡಸು ಸೇರಿ ಎಂಟು ಮಂದಿ ಸಾವು

ಮಂಗಳೂರು ನಿವಾಸಿಗಳಾದ 54, 55, 69, 70, 71 ಹಾಗೂ 72 ವರ್ಷದ ಗಂಡಸರು,45 ವರ್ಷದ ಓರ್ವ ಮಹಿಳೆ ಸಾವು

ಪುತ್ತೂರಿನ 55 ವರ್ಷದ ‌ಮಹಿಳೆ ಕೊರೋನಾಗೆ ಬಲಿ

ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 123ಕ್ಕೆ ಏರಿಕೆ

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಾವಿನ‌ ಸಂಖ್ಯೆ.

Comments are closed.