ಕರಾವಳಿ

ಕಾಪು ಶಾಸಕ ಲಾಲಾಜಿಯವರಿಗೆ ಒಲಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಗಾದಿ!

Pinterest LinkedIn Tumblr

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರು ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಆದೇಶ ಹೊರಡಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಲಾಲಾಜಿ ಮೆಂಡನ್ ಅವರು ಕಾಪು ಯುವಮೋರ್ಚಾದ ಅಧ್ಯಕ್ಷರಾಗಿದ್ದರು. ಬಳಿಕ ಅವರು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಎರಡನೇ ಬಾರಿ ಶಾಸಕರಾಗಿದ್ದಾಗ ಕೊಂಕಣ ರೈಲ್ವೇ ಮಂಡಳಿ ನಿರ್ದೇಶಕರು ಕೂಡಾ ಆಗಿದ್ದರು.

ಬಿಜೆಪಿ ನೇತ್ರತ್ವದ ಸರಕಾರ ಕರ್ನಾಟಕ ರಾಜ್ಯದಲ್ಲಿ ಇಂದಿಗೆ ಒಂದು ವರ್ಷ ಪೂರೈಸುತ್ತಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒಟ್ಟು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದು ಈ ಪೈಕಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಲಾಜಿ ಮೆಂಡನ್ ಅವರನ್ನು ನಿಗಮಕ್ಕೆ ಆಯ್ಕೆ ಮಾಡಲಾಗಿದೆ.

Comments are closed.