ಕರಾವಳಿ

ಶಾಸಕ ಲಾಲಾಜಿಯವರಿಗೆ ನಿಗಮದ ಅಧ್ಯಕ್ಷ ಸ್ಥಾನ ಕೊಟ್ಟು ಕೆಲವೇ ಗಂಟೆಯಲ್ಲಿ ವಾಪಾಸ್ ಪಡೆದ ಸಿಎಂ!

Pinterest LinkedIn Tumblr

ಉಡುಪಿ: ಕರ್ನಾಟಕ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಹಿತ ನಾಲ್ವರ ನೇಮಕಾತಿ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಪಾಸ್ ಪಡೆದಿದ್ದಾರೆ.

ಕಾಪು ಶಾಸಕರಾದ ಲಾಲಾಜಿ ಮೆಂಡನ್ ರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಜಿ.ಎಚ್.ತಿಪ್ಪಾರೆಡ್ಡಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾಗಿ ಪರಣ್ಣ ಈಶ್ವರಪ್ಪ ಮುನವಳ್ಳಿ, ಮತ್ತು ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿಬಸವರಾಜ್ ದಢೇಸೂರ್ ಅವರ ನೇಮಕವನ್ನು ಮುಖ್ಯಮಂತ್ರಿ ಹಿಂಪಡೆದಿದ್ದಾರೆ.

ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು, ಆದರೆ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ನಾಲ್ವರ ಅಧ್ಯಕ್ಷಗಿರಿಯ ಆದೇಶವನ್ನು ಸಿಎಂ ವಾಪಸು ತೆಗದುಕೊಂಡಿದ್ದು ಇದೊಂದು ರಾಜಕೀಯ ಬೆಳವಣಿಗೆ ಎನ್ನಲಾಗಿದೆ.

Comments are closed.