ಕರಾವಳಿ

ಕಳೆದ ಸೋಮವಾರ 89, ನಿನ್ನೆ199, ಇಂದು(ಸೋಮವಾರ)119 : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಅಚ್ಚರಿ ಮೂಡಿಸುತ್ತಿರುವ ಮ್ಯಾಜಿಕ್ ನಂಬ್ರ 9

Pinterest LinkedIn Tumblr

ಮಂಗಳೂರು, ಜುಲೈ. 27 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 119 ಮಂದಿಗೆ ಸೋಂಕು ಧೃಢಪಟ್ಟಿದೆ. ಕಳೆದ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಳೆದ ಆರು ದಿನಗಳಿಗೆ ಹೋಲಿಸಿದರೆ ಸೋಂಕಿತರ ಸಂಖ್ಯೆ ಇಂದು ಸ್ವಲ್ಪ ಕಡಿಮೆಯಾಗಿದೆ.

ಸೋಮವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 119 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು, ರವಿವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4811 ಇತ್ತು. ಆದರೆ ಇಂದು ಮತ್ತೆ 119 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ ಐದು ಸಾವಿರ ಸಮೀಪಿಸಿದ್ದು, ಒಟ್ಟು ಸಂಖ್ಯೆ 4930ಕ್ಕೆ ಏರಿಕೆಯಾಗಿದೆ.

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಅರ್ಥವಾಗದ ಮ್ಯಾಜಿಕ್ ನಂಬ್ರ 9:

ಕಳೆದ ಸೋಮವಾರ ಏಕಾಏಕಿ ಕಡಿಮೆಯಾಗಿದ್ದ (89) ಸೋಂಕಿತರ ಸಂಖ್ಯೆ ಬಳಿಕ ನಿನ್ನೆಯವರೆಗೂ ದಿನದಿಂದ ದಿನಕ್ಕೆ ಹೆಚ್ಚಾಗುತಲೇ ಬಂದಿತ್ತು. ಆದರೆ ಈ ಸೋಮವಾರ ಕಳೆದ ಆರು ದಿನಗಳಿಗೆ ಹೋಲಿಸಿದರೆ ಮತ್ತೆ ಒಮ್ಮೆಲೆ ಕಡಿಮೆಯಾಗಿದ್ದು, ಸೋಮವಾರ ಏನಾದರೂ ವಿಶೇಷ ಮಹಿಮೆ ಇದೆಯೇ ಎಂಬ ಸಂಶಯ ಮೂಡಿದೆ. ಅಥವಾ ಭಾನುವಾರದ ಲಾಕ್ ಡೌನ್ ಎಫೆಕ್ಟ್ ಏನಾದರೂ ಕಾರಣವೇ ಎಂಬ ಶಂಖೆ ಕಾಡಿದೆ.

ಜೊತೆಗೆ ಕಳೆದ ಸೋಮವಾರ 89, ನಿನ್ನೆ 199, ಇಂದು (ಸೋಮವಾರ) 119 : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏನಿದು ಅರ್ಥವಾಗದ ಮ್ಯಾಜಿಕ್ ನಂಬ್ರ 9. ಕಳೆದೆ ಕೆಲವು ದಿನಗಳಿಂದ ಪ್ರತೀ ದಿನದ ಕೊರೋನಾ ಸೋಂಕಿತರ ವರದಿ ನೋಡಿ ಇಲ್ಲಿ 9 ಎಂಬ ಸಂಖ್ಯೆ ನಿಮಗೆ ಆಚ್ಚರಿ ಮೂಡಿಸುವುದು ಖಂಡಿತ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ಇಂದು (33 ಮಂದಿ) ಮತ್ತೆ ಮುಂದುವರಿದಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4930ಕ್ಕೆ ಏರಿಕೆಯಾಗಿದೆ. ಈ ಪೈಕಿ 2502 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಮವಾರ 80 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ 2297 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಸೋಮವಾರ ಪತ್ತೆಯಾದ ಸೋಂಕಿತರ ಪೈಕಿ 46 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 34 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 6 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 33 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಸೋಮವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡಾ ಕೊರೋನಾ ಸ್ಫೋಟ

ಜಿಲ್ಲೆಯಲ್ಲಿ ಇಂದು 119 ಮಂದಿಗೆ ಕೊರೋನಾ ಪಾಸಿಟಿವ್

ಇಂದು ಒಂದೇ ದಿನ 8 ಮಂದಿ ಕೊರೋನಾ ಮಹಾಮಾರಿಗೆ ಬಲಿ

ಪ್ರಾಥಮಿಕ ಸಂಪರ್ಕದಿಂದ 46 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಿಂದ 34 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 33 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 6 ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ.

Comments are closed.