ಕರಾವಳಿ

ವಿ.ವಿ ಸಂಧ್ಯಾ ಕಾಲೇಜು – ಪ್ರಥಮ ವರ್ಷದ ಬಿ.ಎ., ಬಿ.ಕಾಂ., ಬಿ.ಸಿ.ಎ. ಪ್ರವೇಶಾತಿಗೆ ಅರ್ಜಿ ಆಹ್ವಾನ

Pinterest LinkedIn Tumblr

ಮಂಗಳೂರು ಜುಲೈ 29 :ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ ಮಂಗಳೂರು (ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು) ಇಲ್ಲಿನ ಪ್ರಥಮ ವರ್ಷದ ಬಿ.ಎ., ಬಿ.ಕಾಂ., ಬಿ.ಸಿ.ಎ. ತರಗತಿಯ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹಗಲು ಹೊತ್ತಿನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ (CA Foundation Course/ ICS / ACS) ಕೋರ್ಸುಗಳನ್ನು ವ್ಯಾಸಂಗ ಮಾಡುತ್ತಿರುವ, ಆರ್ಥಿಕವಾಗಿ ಹಿಂದುಳಿದ, ಹಗಲು ಹೊತ್ತಿನಲ್ಲಿ ಕೆಲಸ ನಿರ್ವಹಿಸಿ ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪದವಿ ವ್ಯಾಸಂಗವನ್ನು ಮಾಡಬಹುದಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯವು ನಿಗದಿ ಪಡಿಸಿದ ಕನಿಷ್ಟ ಶುಲ್ಕ ಹಾಗೂ ಇತರ ಸೌಕರ್ಯಗಳಾದ ಸುಸಜ್ಜಿತ ಗ್ರಂಥಾಲಯ, ಅನುಭವಿ ಶಿಕ್ಷಕರು, ಕಂಪ್ಯೂಟರ್ ಲ್ಯಾಬ್ ಹಾಗೂ ಸೈಬರ್ ಲ್ಯಾಬ್‍ಗಳಿದ್ದು ಶೈಕ್ಷಣಿಕ ವರ್ಷದಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು, ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ನಡೆಸಲಾಗುವುದು.

ಕಾಲೇಜಿನಲ್ಲಿ ನೀಡಲಾಗುವ ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪದವಿ ವ್ಯಾಸಂಗ ಪೂರ್ಣಗೊಳಿಸಬಹುದಾಗಿದೆ. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸರಕಾರದ ವಿವಿಧ ಇಲಾಖೆಗಳಿಂದ ನೀಡಲಾಗುವ ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜು ಕಚೇರಿ ಅಥವಾ ದೂರವಾಣಿ ಸಂಖ್ಯೆ 0824-2424608 ಯನ್ನು ಸಂಪರ್ಕಿಸಲು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ ಇವರ ಪ್ರಕಟಣೆ ತಿಳಿಸಿದೆ.

Comments are closed.