ಕರ್ನಾಟಕ

ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಮನೆಯಲ್ಲಿ ಸಚಿವ ಸಿ.ಟಿ. ರವಿ ಸಭೆ: ಸಿನಿರಂಗದ ಮನವಿಯೇನು?

Pinterest LinkedIn Tumblr

ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಹಿರಿಯ ನಟ ಡಾ. ಶಿವರಾಜ್​​ ಕುಮಾರ್ ನಿವಾಸದಲ್ಲಿ ಬುಧವಾರ ಸಭೆ ನಡೆದಿದೆ. ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾದೋದ್ಯಮ ಸಚಿವ ಸಿ.ಟಿ ರವಿ ಮತ್ತು ಚಿತ್ರರಂಗದ ನಟರು, ನಿರ್ಮಾಪಕ್ರು ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.

ಕಿರುತೆರೆ ಮತ್ತು ಚಲನಚಿತ್ರ ಉದ್ಯಮವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್ ಹಾಗು ಚಲನಚಿತ್ರರಂಗದ ಪುನಶ್ಚೇತನದ ನೆರವಿಗಾಗಿ ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರ ಮಂದಿರ ತೆರೆಯಲು ಹಾಗು ದರ ನಿಗದಿ, ತೆರಿಗೆ ವಿನಾಯತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಇದರ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದ್ದೇನೆ ಎಂದು ಸಿ.ಟಿ ರವಿ ಹೇಳಿದ್ದಾರೆ.

ಈ ಮಹತ್ವದ ಸಭೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟರಾದ ರವಿಚಂದ್ರನ್, ಉಪೇಂದ್ರ, ರಮೇಶ್ ಅರವಿಂದ್, ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್, ಗಣೇಶ್, ದುನಿಯಾ ವಿಜಯ್​, ಶ್ರೀ ಮುರುಳಿ, ರಕ್ಷಿತ್ ಶೆಟ್ಟಿ, ನಿಮಾಪಕರಾದ ಶ್ರೀಕಾಂತ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Comments are closed.