ಕರಾವಳಿ

ಮಂಗಳೂರಿನಲ್ಲಿ ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಆರೋಪಿಯನ್ನು ಬಂಧಿಸಿದ ಉಡುಪಿ ಡಿಸಿಐಬಿ ಪೊಲೀಸರು

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯ ಡಿಸಿಐಬಿ ಪೊಲೀಸರು ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನೊಬ್ಬನನ್ನು ಬಂಧಿಸಿದ್ದಾರೆ. ಮೂಡಬಿದಿರೆಯ ಗುರುಪ್ರಸಾದ್ ಎಂಬಾತನನ್ನು ಡಿಸಿಐಬಿ ಇನ್ಸ್‌ಪೆಕ್ಟರ್ ಮಂಜಪ್ಪ ಡಿ.ಆರ್ ಅವರಿಗೆ ದೊರೆತ ಖಚಿತ ಮಾಹಿತಿಯಂತೆ ಉಡುಪಿ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಬಳಿ ಬಂಧಿಸಿದ್ದಾರೆ.

ಆತ ಕಾರಿನಿಂದ ಕಳವು ‌ಮಾಡಿದ ನಗದು ಹಣ 2,03,700. ರೂಪಾಯಿ ನಗದು ಹಣ, ವಿವೋ ಕಂಪೆನಿ ಮೊಬೈಲ್‌ ಫೋನ್‌ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈತ ತಾನು ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕಾರಿನಿಂದ ನಗದು ಹಣವನ್ನು ಕಳ್ಳತನ ಮಾಡಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಅಡಿಶನಲ್ ಎಸ್ಪಿ ಕುಮಾರ್ ಚಂದ್ರ, ಉಡುಪಿ ಡಿವೈಎಸ್ಪಿ ಟಿ. ಜಯಶಂಕರ್‌ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ‌ ಇನ್ಸ್‌ಪೆಕ್ಟರ್ ಮಂಜಪ್ಪ ಡಿ.ಆರ್ ಹಾಗೂ ಎಎಸ್ಐ ರವಿಚಂದ್ರ ಮತ್ತು ಸಿಬ್ಬಂದಿಗಳಾದ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ್,ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಕಾರ್ಯಚರಣೆಯಲ್ಲಿ‌ ಇದ್ದರು.

Comments are closed.