ಕರಾವಳಿ

ಮಂಗಳೂರು: ಜಿ.ಪಂ. ಅಕೌಂಟ್ ಮೆನೇಜರ್ ಹುದ್ದೆಗೆ ಅರ್ಜಿ ಆಹ್ವಾನ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ ಇಂತಿವೆ:

ವಿದ್ಯಾರ್ಹತೆ-ಎಂ.ಕಾಂ / ಎಂ.ಬಿ.ಎ ಫೈನಾನ್ಸ್, ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು, ಹುದ್ದೆಯಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು, ಮಾಸಿಕ ವೇತನ ರೂ. 30,000 ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆ ದಿನ. ಅರ್ಜಿಯನ್ನು ದ.ಕ.ಜಿಲ್ಲಾ ಪಂಚಾಯತ್ ವೆಬ್‍ಸೈಟ್ zpdk.kar.nic.in ಮೂಲಕ ಸಲ್ಲಿಸುವಂತೆ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆ ತಿಳಿಸಿದೆ.

Comments are closed.