ಕರಾವಳಿ

ದ.ಕ.ಜಿಲ್ಲೆಯಲ್ಲಿ ಶನಿವಾರ 139 ಮಂದಿಗೆ ಸೋಂಕು ದೃಢ

Pinterest LinkedIn Tumblr

ಮಂಗಳೂರು, ಆಗಸ್ಟ್.02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 139 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಸೋಂಕಿತರ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ.

ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 139 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು, ನಿನ್ನೆ ಸ್ವಲ್ಪ ಕಡಿಮೆಯಾಗಿದೆ. ಶುಕ್ರವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5713 ಇತ್ತು. ಆದರೆ ಶನಿವಾರ ಮತ್ತೆ 139 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,852ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ಮತ್ತೆ ಮುಂದುವರಿದಿದೆ.

ಶನಿವಾರ 54 ಮಂದಿ ಗುಣಮುಖರಾಗಿದ್ದು ಈವರೆಗೆ 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 14, ಪುತ್ತೂರಿನಲ್ಲಿ 9, ಹಾಗೂ ಬೇರೆ ಜಿಲ್ಲೆಯ ಆರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇನ್ನು ಶನಿವಾರ ಜಿಲ್ಲೆಯಲ್ಲಿ ಬರೋಬ್ಬರಿ 6 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ವರದಿಯಾಗಿದೆ.

ಶನಿವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 139 ಮಂದಿಗೆ ಕೊರೋನಾ ಪಾಸಿಟಿವ್

ನಿನ್ನೆ ಕೂಡಾ ಬರೋಬ್ಬರಿ 6 ಮಂದಿ ಕೊರೋನಾ ಮಹಾಮಾರಿಗೆ ಬಲಿ

ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 159ಕ್ಕೆ ಏರಿಕೆ

ಮಂಗಳೂರು ತಾಲೂಕಿನ‌ 91 ಮಂದಿಗೆ ಶನಿವಾರ ಕೊರೋನಾ ಪಾಸಿಟಿವ್

ಬಂಟ್ವಾಳ 19, ಬೆಳ್ತಂಗಡಿ 14, ತಾಲೂಕಿನ‌ 9‌ ಮಂದಿಗೆ ಕೊರೋನಾ ಪಾಸಿಟಿವ್

ಇತರೆ ಜಿಲ್ಲೆಯಿಂದ ಬಂದ 6 ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,852 ಮಂದಿಗೆ ಕೊರೋನಾ‌ ಪಾಸಿಟಿವ್

ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ.

Comments are closed.