ಕರಾವಳಿ

ದ.ಕ.ಜಿಲ್ಲೆಯಲ್ಲಿ ರವಿವಾರ 163 ಮಂದಿಗೆ ಪಾಸಿಟಿವ್ : ಆರು ಸಾವಿರ ದಾಟಿದ ಸೋಂಕಿತರ ಸಂಖ್ಯೆ

Pinterest LinkedIn Tumblr

ಮಂಗಳೂರು, ಆಗಸ್ಟ್.03 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ಮತ್ತೆ163 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರವಿವಾರ ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ.

ರವಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 163 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು, ಶನಿವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,852 ಇತ್ತು. ಆದರೆ ರವಿವಾರ ಮತ್ತೆ 163 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದ್ದು, 6015ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ಮತ್ತೆ ಮುಂದುವರಿದಿದೆ.

ರವಿವಾರದಂದು 45 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 3116 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಲ್ಲಿಯ ತನಕ 169 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2730 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಇನ್ನು ಮಂಗಳೂರು ತಾಲೂಕಿನಲ್ಲಿ 107 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದಲ್ಲಿ 13, ಬೆಳ್ತಂಗಡಿಯಲ್ಲಿ 19, ಪುತ್ತೂರು ಹನ್ನೊಂದು, ಸುಳ್ಯ ತಾಲೂಕಿನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಹೊರ ಜಿಲ್ಲೆಯ 9 ಹಾಗೂ ಹೊರ ರಾಜ್ಯದ ಮೂವರಲ್ಲಿ ರವಿವಾರದಂದು ಸೋಂಕು ಪತ್ತೆಯಾಗಿದೆ.

ರವಿವಾರದ ಪ್ರಮುಖ ಅಂಶಗಳು :

ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 163 ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ರವಿವಾರ ಬರೋಬ್ಬರಿ 10 ಮಂದಿ ಕೊರೋನಾ ಮಹಾಮಾರಿಗೆ ಬಲಿ

ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 169ಕ್ಕೆ ಏರಿಕೆ

ದಿನೇ‌ದಿನೇ ಹೆಚ್ಚಳವಾಗುತ್ತಿರುವ ಕೊರೋನಾ‌ ಸಾವು

ಮಂಗಳೂರು ತಾಲೂಕಿನ‌ 107 ಮಂದಿಗೆ ರವಿವಾರ ಕೊರೋನಾ ಪಾಸಿಟಿವ್

ಬೆಳ್ತಂಗಡಿಯ 19, ಬಂಟ್ವಾಳದ 13, ಪುತ್ತೂರಿನ 11 ಹಾಗೂ ಸುಳ್ಯ ತಾಲೂಕಿನ ಓರ್ವ ವ್ಯಕ್ತಿಗೆ ಕೊರೋನಾ ಪಾಸಿಟಿವ್

ಹೊರ ಜಿಲ್ಲೆಯಿಂದ ಬಂದ 9 ಮಂದಿಗೆ ಕೊರೋನಾ ಪಾಸಿಟಿವ್

ಹೊರ ರಾಜ್ಯದಿಂದ ಬಂದ ಮೂವರಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,015 ಮಂದಿಗೆ ಕೊರೋನಾ‌ ಪಾಸಿಟಿವ್.

Comments are closed.