ಮಂಗಳೂರು, ಆಗಸ್ಟ್.03: : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ಒಂದೇ ದಿನ ಕೊರೋನಾ ಸೋಂಕಿಗೆ ಬರೋಬ್ಬರಿ 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 169ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಸಾವು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕೊರೋನ ಸೋಂಕಿಗೆ ರವಿವಾರ ಇದೇ ಮೊದಲ ಬಾರಿಗೆ ಒಂದೇ ದಿನ 10 ಮಂದಿ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನದಿಂದ ಮೃತಪಡುವವರ ಸಂಖ್ಯೆಯಲ್ಲಿ ತೀರಾ ಹೆಚ್ಚಳಗೊಂಡು ಭೀತಿ ಮೂಡಿಸಿದೆ. ಇಲ್ಲಿಯವರೆಗೆ ಒಂದಕಿಯಲ್ಲಿದ್ದ ಸಾವಿನ ಸಂಖ್ಯೆ ಈಗ ದಿಢೀರನೆ ಎರಡಂಕಿಗೆ ಜಿಗಿತ ಕಂಡಿದೆ.
ಸಮಾಧಾನಕರ ಬೆಳವಣಿಗೆಯಲ್ಲಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ 2,730 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 3,116 ಸಕ್ರಿಯ ಪ್ರಕರಣಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
ರವಿವಾರದ ಪ್ರಮುಖ ಅಂಶಗಳು :
ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ
ಜಿಲ್ಲೆಯಲ್ಲಿ ರವಿವಾರ ಬರೋಬ್ಬರಿ 10 ಮಂದಿ ಕೊರೋನಾ ಮಹಾಮಾರಿಗೆ ಬಲಿ
ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 169ಕ್ಕೆ ಏರಿಕೆ
ದಿನೇದಿನೇ ಹೆಚ್ಚಳವಾಗುತ್ತಿರುವ ಕೊರೋನಾ ಸಾವು.

Comments are closed.