ಕರಾವಳಿ

ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿ ದೈಹಿಕ ಅಂತರ, ಮಾಸ್ಕ್ ಕಡ್ಡಾಯ : ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು ಆಗಸ್ಟ್ 07: ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಧರ್ಭದಲ್ಲಿ ದೈಹಿಕ ಅಂತರ, ಸಾಮಾಜಿಕ ಅಂತರ ಮತ್ತು ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಕೆ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಮಟ್ಟದ ಧ್ವಜಾರೋಹಣ ನಡೆಯಲಿದ್ದು ಈ ಸಂದರ್ಭದಲ್ಲಿ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ. ಸ್ವಾತಂತ್ರ್ಯ ದಿನಾಚರಣೆಯನ್ನು ಸಾರ್ವಜನಿಕರ ವಿಕ್ಷಣೆಗಾಗಿ ಸಾಮಾಜಿಕ ಜಾಳತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ನಗರದ ಮುಖ್ಯ ವೃತ್ತದಲ್ಲಿ ಡಿಜಿಟಲ್ ಪರದೆಯನ್ನು ಅಳವಡಿಸಿ ಸಾರ್ವಜನಿಕರ ವಿಕ್ಷಣೆಗೆ ಅನುಕೂಲ ವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜನ ಸಾಮಾನ್ಯರು ತಮ್ಮ ದೇಶ ಭಕ್ತಿಯನ್ನು ಮನೆಯಲ್ಲಿ ಇದ್ದು ವ್ಯಕ್ತಪಡಿಸಬೇಕು ಎಂದು ಹೇಳಿದರು.

ಈ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿಶೇಷವಾಗಿ ಕೊರೋನಾದ ಸಮಯದಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಪೌರ ಕಾರ್ಮಿಕರು, ಆಶಾ ಕಾರ್ಯಕತೆಯರು, ಸ್ವಚ್ಚತಾ ಕಾರ್ಮಿಕರು, ಪೊಲೀಸರು, ವೈದ್ಯರ ಸೇವೆಯನ್ನು ಗುರುತಿಸಿ ಅವರಿಗೆ ಸಮ್ಮಾನ ಮಾಡುವ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿಕೊಂಡಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.

Comments are closed.