ಮಂಗಳೂರು : ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಕೋವಿಡ್ ನಿರ್ವಹಣೆ ಸಂಬಂಧ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಜೊತೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

Comments are closed.