ಕರಾವಳಿ

ಸ್ವಾತಂತ್ರ್ಯೋತ್ಸವ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ನಿಷೇಧ – ಖಾದಿ ಧ್ವಜ ಬಳಕೆ ಮಾಡಲು ಸೂಚನೆ

Pinterest LinkedIn Tumblr

ಮಂಗಳೂರು ಆಗಸ್ಟ್ 08 : ಆಗಸ್ಟ್ 15 ರಂದು ಆಚರಿಸಲಿರುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಿರಲು ವಿನಂತಿಸಲಾಗಿದೆ.

ಸಾರ್ವಜನಿಕರು ಹಾಗೂ ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲೀಕರು ಮತ್ತು ಉಪಯೋಗಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿಯವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.