ಕರ್ನಾಟಕ

ಕಳೆದ ವರ್ಷದ ಅತಿವೃಷ್ಟಿಗೆ ಖರ್ಚು ವೆಚ್ಚ, ಪರಿಹಾರದ ಬಗ್ಗೆ ಸರ್ಕಾರದಿಂದ ವಿವರ ಕೇಳಿದ ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ಕಳೆದ ವರ್ಷದ ಅತಿವೃಷ್ಟಿಗೆ ಸರ್ಕಾರದ ಖರ್ಚು ವೆಚ್ಚ, ಪರಿಹಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸರ್ಕಾರದಿಂದ ವಿವರ ಕೇಳಿದ್ದಾರೆ.

ಕಳೆದ ತಿಂಗಳು ಖರ್ಚುವೆಚ್ಚ ಮಾಹಿತಿ ವಿವರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರಾದರೂ ಉತ್ತರ ಬಂದಿರಲಿಲ್ಲ‌‌. ಸರ್ಕಾರದ ಬೇಜವಾಬ್ದಾರಿ ನಡೆಯಿಂದ ಬೇಸರಗೊಂಡಿರುವ ಸಿದ್ದರಾಮಯ್ಯ,ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಡಿಯುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಟೀಕಿಸಿದ್ದಾರೆ.

ಕಳೆದ ವರ್ಷದ ಆಗಸ್ಟ್ ನಿಂದ ಅಕ್ಟೋಬರ್ ವರೆಗೆ ಬಿದ್ದ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳನ್ನು ಪುನರ್ ನಿರ್ಮಿಸಲು ಖರ್ಚು ಮಾಡಿದ ಹಣ ಏಷ್ಟು? ಇನ್ನು ಎಷ್ಟು ಕಾಮಗಾರಿಗಳು ಬಾಕಿ ಇವೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Comments are closed.