(ಕಡತ ಚಿತ್ರ)
ಮಂಗಳೂರು, ಆಗಸ್ಟ್.10 : 2020ರ ಜೂನ್-ಜುಲೈನಲ್ಲಿ ನಡೆದ ಎಸೆಸೆಲ್ಸಿ ಫಲಿತಾಂಶವು ಸೋಮವಾರ ಮಧ್ಯಾಹ್ನ ಪ್ರಕಟಗೊಂಡಿದ್ದು, ಈ ಬಾರಿ ದ.ಕ. ಜಿಲ್ಲೆ 12ನೇ ಸ್ಥಾನವನ್ನು ಪಡೆದಿದೆ.
ಪ್ರಥಮ ಸ್ಥಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಪಡೆದರೆ, ದ್ವಿತೀಯ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ. ಉಡುಪಿ ಜಿಲ್ಲೆ 7ನೇ ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದ 8,11,050 ವಿದ್ಯಾರ್ಥಿಗಳ ಪೈಕಿ, 5,82,316 ಪಾಸಾಗಿದ್ದಾರೆ. 220 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆದಿತ್ತು.
ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಸುಳ್ಯ ತಾಲೂಕು ಸುಬ್ರಹ್ಮಣ್ಯ ವಿದ್ಯಾನಗರದ ಕುಮಾರಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 625ರಲ್ಲಿ 625 ಅಂಕ ಪಡೆದಿದ್ದು ರಾಜ್ಯದಲ್ಲಿ ಒಟ್ಟು 6 ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ.
ಕೊರೋನ ಹಿನ್ನೆಲೆ ಫಲಿತಾಂಶವನ್ನು ವಿದ್ಯಾರ್ಥಿಗಳ ಅಥವಾ ಪೋಷಕರ ಮೊಬೈಲ್‍ಗೆ ಕಳಿಸಿಕೊಡಲಾಗುತ್ತದೆ. ಅಲ್ಲದೆ, ಎಸೆಸೆಲ್ಸಿ ಬೋರ್ಡ್ ಅಧಿಕೃತ ವೆಬ್‍ಸೈಟ್ www.sslc.kar.nic.in ಹಾಗೂ karresults.nic.in ನಲ್ಲಿ ಕೂಡ ಫಲಿತಾಂಶ ಪಡೆಯಬಹುದಾಗಿದೆ.

Comments are closed.