ಕರಾವಳಿ

ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನಿಂದ ವೆನ್‍ಲಾಕ್ ಹಾಗೂ ಕೆ.ಎಂ.ಸಿ. ಆಸ್ಪತ್ರೆಗೆ ಕೋವಿಡ್ ಕಿಟ್ ವಿತರಣೆ

Pinterest LinkedIn Tumblr

ಮಂಗಳೂರು ಆಗಸ್ಟ್ 11 : ನಾಡೋಜ ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಉಡುಪಿ ಇವರಿಂದ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಮತ್ತು ಕೆ.ಎಂ.ಸಿ. ಆಸ್ಪತ್ರೆ, ಮಂಗಳೂರಿಗೆ ಇಲ್ಲಿಗೆ ಸುಮಾರು ರೂ. 12 ಲಕ್ಷ ಮೌಲ್ಯದ ಕೋವಿಡ್-19 ಪಿಪಿಇ ಕಿಟ್‍ನ್ನು ವಿತರಿಸಲಾಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮ್ಮುಖದಲ್ಲಿ ಡಾ. ಜಿ.ಶಂಕರ್ ಅವರು ವೆನ್‍ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸದಾಶಿವ ಮತ್ತು ಬಿ. ಶೇಷಪ್ಪ ಹಾಗೂ ಕೆ.ಎಂ.ಸಿ ಪರವಾಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೇಮಲತಾರವರಿಗೆ ಸರಳ ಕಾರ್ಯಕ್ರಮದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್‍ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ್, ಕೊಲ್ಲಾಡಿ ಬಾಲಕೃಷ್ಣ ರೈ ಮತ್ತಿತರರು ಹಾಜರಿದ್ದರು.

Comments are closed.