ಕರಾವಳಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಅಧಿಕಾರ ಆಯಾಯ ಜಿಲ್ಲಾಧಿಕಾರಿಗಳಿಗೆ..!

Pinterest LinkedIn Tumblr

ಉಡುಪಿ: ಈ ಬಾರಿ ಸಾರ್ವಜನಿಕವಾಗಿ ಗೌರಿ-ಗಣೇಶ ಮೂರ್ತಿ ಇಟ್ಟು ಹಬ್ಬ ಆಚರಿಸುವುದು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ದಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟನೆ ಹೊರಡಿಸಿದ್ದಾರೆ.

ಈ ಬಗ್ಗೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಅವರು, ‘ ಗೌರಿ ಗಣೇಶ ಹಬ್ಬದ ಪ್ರಯುಕ್ತ ಭಕ್ತಾಧಿಗಳು ಸಾರ್ವಜನಿಕವಾಗಿ ಗಣೇಶ ಮಣ್ಣಿನ ಮೂರ್ತಿಗಳನ್ನು ಟೆಂಟ್-ಹೌಸಿನಲ್ಲಿಟ್ಟು ಪೂಜೆ ಸಲ್ಲಿಸಲು ಕೋರಿದ್ದು ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲಯಲ್ಲಿ ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗಳ ಅನ್ವಯ ಭಕ್ತಾಧಿಗಳು ಸಾರ್ವಜನಿಕವಾಗಿ ಗೌರಿ-ಗಣೇಶ ಮೂರ್ತಿಗಳನ್ನಿಟ್ಟು ಹಬ್ಬ ಆಚರಿಸಲು ಸ್ಥಳೀಯವಾಗಿ ಪರಿಶೀಲಿಸಿ ಆಯಾಯ ಜಿಲ್ಲಾಧಿಕಾರಿಗಳ ಹಂತದಲ್ಲಿ ಅನುಮತಿ ನೀಡಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Comments are closed.