ಕರಾವಳಿ

ಡಿ.ಜಿ.ಹಳ್ಳಿ ಹಲ್ಲೆ ಪ್ರಕರಣ: ದ.ಕ.ಜಿಲ್ಲಾ ಪತ್ರಕರ್ತರ ಸಂಘದಿಂದ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Pinterest LinkedIn Tumblr

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ – ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ – ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನಾಥ್ ಶೆಟ್ಟಿ ಬಾಳ

ಮಂಗಳೂರು : ಬೆಂಗಳೂರಿನ ದೇವರ ಜೀವನ ಹಳ್ಳಿ (ಡಿ ಜಿ ಹಳ್ಳಿ) ಪ್ರಕರಣದಲ್ಲಿ ವರದಿ ಮಾಡಲು ಹೋಗಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ, ವಾಹನ ಜಖಂ ಮಾಡಿರುವುದು ಅತ್ಯಂತ ಖಂಡನೀಯ.

ಸಂಬಂಧಿಸಿದ ಹಲ್ಲೆಕೋರರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಮುಖರ ನಿಯೋಗವು ದ.ಕ.ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ( ರಿ) ಮಂಗಳೂರು, ಇದರ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯರಾದ ಜಗನಾಥ್ ಶೆಟ್ಟಿ ಬಾಳ ಹಾಗೂ ಮತ್ತಿತ್ತರ ಪ್ರಮುಖರು ಇದ್ದರು.

Comments are closed.