ಕರಾವಳಿ

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೋನಾ ಪಾಸಿಟಿವ್; ಕೋವಿಡ್ ಕೇರ್‍ ಸೆಂಟರಿಗೆ ದಾಖಲು

Pinterest LinkedIn Tumblr

ಉಡುಪಿ: ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೋನಾ ಅವರಿಗೆ ಕೋವಿಡ್-19 ಸೋಂಕು ಪಾಸಿಟಿವ್ ಇರುವುದು ದೃಢಪಟ್ಟಿದ್ದು ಸದ್ಯ ಕೋವಿಡ್ ಕೇರ್‍ ಸೆಂಟರಿಗೆ ದಾಖಲಾಗಿದ್ದಾರೆ. ಈ ಬಗ್ಗೆ ಅವರು ಫೇಸ್ ಬುಕ್ ಫೇಜಿನಲ್ಲಿ ಬರೆದುಕೊಂಡಿದ್ದಾರೆ.

F.B ಪೇಜಿನಲ್ಲಿ ಬರೆದುಕೊಂಡಿರುವ ಅವರು, ‘ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು ಮುಂಜಾಗೃತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದ್ದು ಯಾವುದೇ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಶೂಶ್ರುಷೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ..ನಾನು ಆದಷ್ಟು ಬೇಗ ಕಾಪು ಜನತೆಯ ಸೇವೆಗೆ ಮರಳುತ್ತೇನೆ ತಮ್ಮ ಸಹಕಾರವಿರಲಿ’ ಎಂದಿದ್ದಾರೆ.

Comments are closed.