ಮಂಗಳೂರು, ಆಗಸ್ಟ್.15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ಮಹಾಸ್ಫೋಟ ಗೊಂಡಿದ್ದು, ಮತ್ತೆ 307 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶುಕ್ರವಾರ ಸೋಂಕಿತರ ಸಂಖ್ಯೆ 8378ಕ್ಕೆ ಏರಿಕೆಯಾಗಿದೆ.
ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 307 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು,ಶುಕ್ರವಾರ ಮತ್ತೆ 307 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 8378ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ( 124 )ಮತ್ತೆ ಮುಂದುವರಿದಿದೆ.
ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು ಒಂದೇ ದಿನ 242 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2007 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ತನಕ ಜಿಲ್ಲೆಯಲ್ಲಿ ಒಟ್ಟು 6115 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಶುಕ್ರವಾರ ಸೋಂಕು ಪತ್ತೆಯಾದವರ ಪೈಕಿ ಪ್ರಾಥಮಿಕ ಸಂಪರ್ಕದಿಂದ 44 ಮಂದಿಗೆ ಸೋಂಕು ಪತ್ತೆಯಾಗಿದೆ. 130 ಐಎಲ್‌ಐ ಪ್ರಕರಣಗಳಾಗಿದ್ದು, 9 ಸಾರಿ ಪ್ರಕರಣಗಳಾಗಿವೆ. 124 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಶುಕ್ರವಾರದಂದು ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 256ಕ್ಕೆ ಏರಿಕೆಯಾಗಿದೆ.
ಶುಕ್ರವಾರದ ಪ್ರಮುಖ ಅಂಶಗಳು
ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬರೋಬ್ಬರಿ 307 ಮಂದಿಗೆ ಕೊರೋನಾ ಪಾಸಿಟಿವ್
ಮಂಗಳೂರು ತಾಲೂಕಿನ 197 ಮಂದಿಗೆ ಕೊರೋನಾ ಪಾಸಿಟಿವ್
ಬಂಟ್ವಾಳ 57, ಸುಳ್ಯ 17, ಪುತ್ತೂರು 14, ಬೆಳ್ತಂಗಡಿ 14 ಹಾಗೂ ಹೊರ ಜಿಲ್ಲೆಯಿಂದ ಬಂದ 8 ಮಂದಿಗೆ ಕೊರೋನಾ ಪಾಸಿಟಿವ್
ILI ಪ್ರಕರಣದಿಂದ 130 ಮಂದಿಗೆ ಕೊರೋನಾ ಪಾಸಿಟಿವ್
ಸಂಪರ್ಕವೇ ಪತ್ತೆಯಾಗದ 124 ಮಂದಿಗೆ ಕೊರೋನಾ ಪಾಸಿಟಿವ್
ಪ್ರಾಥಮಿಕ ಸಂಪರ್ಕದಿಂದ 44 ಮಂದಿಗೆ ಕೊರೋನಾ ಪಾಸಿಟಿವ್
SARI ಪ್ರಕರಣದಿಂದ 9 ಮಂದಿಗೆ ಕೊರೋನಾ ಪಾಸಿಟಿವ್
ಶುಕ್ರವಾರ ಜಿಲ್ಲೆಯಲ್ಲಿ ಬರೋಬ್ಬರಿ 242 ಮಂದಿ ಗುಣಮುಖ
ಶುಕ್ರವಾರ 6 ಮಂದಿ ಕೊರೋನಾ ಮಹಾಮಾರಿಗೆ ಬಲಿ
ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಬರೋಬ್ಬರಿ 256ಕ್ಕೆ ಏರಿಕೆ
Comments are closed.