ಕರಾವಳಿ

ಮುಂಗಾರು ಬೆಳೆ ಸಮೀಕ್ಷೆ : ದ.ಕ.ಜಿಲ್ಲೆಯ ರೈತರಿಗೆ ಅ್ಯಪ್‍ಲ್ಲಿ ಅಪ್‍ಲೋಡ್ ಮಾಡಲು ಸೂಚನೆ

Pinterest LinkedIn Tumblr

ಮಂಗಳೂರು ಆಗಸ್ಟ್ 16 : 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲಾದ್ಯಂತ ಆರಂಭವಾಗಿದೆ. ಈ ಬಾರಿ ಎಲ್ಲಾ ಹಂಗಾಮುಗಳಲ್ಲಿ ರೈತರೇ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಛಾಯಾಚಿತ್ರ ಸಹಿತ ದಾಖಲಿಸಿ ಬೆಳೆ ಸಮೀಕ್ಷೆ ಅ್ಯಪ್‍ಲ್ಲಿ ಅಪ್‍ಲೋಡ್ ಮಾಡಲು ಅಗಸ್ಟ್ 24ರ ವರೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.

ಆ್ಯಪ್‍ನ್ನು ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ರೈತರು ಸ್ವತಂತ್ರವಾಗಿ ಅಪ್‍ಲೋಡ್ ಮಾಡಲು ಸಾಧ್ಯವಾಗದಿದ್ದಲ್ಲಿ ಗ್ರಾಮಮಟ್ಟದ ಖಾಸಗಿ ನಿವಾಸಿಗಳು ಅಥವಾ ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಹಾಯ ಪಡೆದುಕೊಳ್ಳಬಹುದಾಗಿದೆ.

ಈ ಬೆಳೆ ಮಾಹಿತಿ ಆಧಾರದ ಮೇಲೆ ಕನಿಷ್ಠ ಬೆಂಬಲ ನಿಗದಿ, ಬೆಳೆ ಪರಿಹಾರ – ಬೆಳೆ ವಿಮಾ ಯೋಜನೆ, ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್. ಅಡಿಯಲ್ಲಿ ಸಹಾಯಧನ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ವಿವರ, ಅರ್ಹ ಫಲಾನುಭವಿಗಳನ್ನು ಗುರುತಿಸುವುದು, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ಇತ್ಯಾದಿ ದಾಖಲಾತಿಗಳನ್ನು ಈ ಸಮೀಕ್ಷಾ ವರದಿ ಆಧರಿಸಿ ನಡೆಸಲಾಗುತ್ತದೆ.

ಬೆಳೆ ವಿವರಗಳನ್ನು ಅಪ್‍ಲೋಡ್ ಮಾಡದಿದ್ದಲ್ಲಿ ರೈತರಿಗೆ ಇಲಾಖೆಗಳಿಂದ ದೊರೆಯುವ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿರುವ Farmers crop survey app2020-21(https://play.google.com/store/apps/details?id=com.csk.KariffTPKfarmer.cropsurvey) ಅನ್ನು ಡೌನ್‍ಲೋಡ್ ಮಾಡಿ ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು /ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ತೋಟಗಾರಿಕಾ ಇಲಾಖೆಯ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾದಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.