ಕರಾವಳಿ

ದ.ಕ.ಜಿಲ್ಲೆಯಲ್ಲಿ ಭಾನುವಾರ 229 ಮಂದಿಗೆ ಪಾಸಿಟಿವ್ : 7 ಮಂದಿ ಕೊರೋನಾ ಮಹಾಮಾರಿಗೆ ಬಲಿ

Pinterest LinkedIn Tumblr

ಮಂಗಳೂರು, ಆಗಸ್ಟ್.17 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆ229 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ ಸೋಂಕಿತರ ಸಂಖ್ಯೆ 8878ಕ್ಕೆ ಏರಿಕೆಯಾಗಿದೆ

ಭಾನುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 229 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು,ಭಾನುವಾರ ಮತ್ತೆ 229 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 8878ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ( 78 )ಮತ್ತೆ ಮುಂದುವರಿದಿದೆ.

ಭಾನುವಾರ ಮಂಗಳೂರಿನಲ್ಲಿ 122, ಬಂಟ್ವಾಳದಲ್ಲಿ 36, ಬೆಳ್ತಂಗಡಿಯಲ್ಲಿ 8, ಪುತ್ತೂರಿನಲ್ಲಿ 31, ಸುಳ್ಯದಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 31 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಭಾನುವಾರ ದ.ಕ.ಜಿಲ್ಲೆಯಲ್ಲಿ 128 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 6445 ಕ್ಕೆ ಏರಿಕೆಯಾಗಿದೆ.

ಭಾನುವಾರ123 ಐಎಲ್‌ಎ, 6 ಎಸ್‌ಎಆರ್‌ಐ ಪ್ರಕರಣಗಳಾಗಿದ್ದು 22 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಇನ್ನು 78 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.

ಭಾನುವಾರ ದೃಢಪಟ್ಟ 229 ಸೋಂಕಿತರ ಪೈಕಿ 131 ಯಲ್ಲಿ ರೋಗದ ಗುಣಲಕ್ಷಣಗಳಿದ್ದು 98 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಪ್ರಸ್ತುತ 2164 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಭಾನುವಾರ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಮೂವರು ಮಂಗಳೂರಿನವರಾಗಿದ್ದು ನಾಲ್ವರು ಇತರೆ ಜಿಲ್ಲೆಯವರಾಗಿದ್ದಾರೆ. ಈವರೆಗೆ 269 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಭಾನುವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 229 ಮಂದಿಗೆ ಕೊರೋನಾ ಪಾಸಿಟಿವ್

ಭಾನುವಾರ ಮಂಗಳೂರು ತಾಲೂಕಿನ‌ 122 ಮಂದಿಗೆ ಕೊರೋನಾ ಪಾಸಿಟಿವ್

ಬಂಟ್ವಾಳ 36, ಪುತ್ತೂರು 31, ಬೆಳ್ತಂಗಡಿ 8, ಸುಳ್ಯ 1 ಹಾಗೂ ಹೊರ ಜಿಲ್ಲೆಯಿಂದ ಬಂದ 31 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಿಂದ 123 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 78 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 22 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 6 ಮಂದಿಗೆ ಕೊರೋನಾ ಪಾಸಿಟಿವ್

ಭಾನುವಾರ ಜಿಲ್ಲೆಯಲ್ಲಿ 128 ಮಂದಿ ಗುಣಮುಖ

ಭಾನುವಾರ 7 ಮಂದಿ ಕೊರೋನಾ ಮಹಾಮಾರಿಗೆ ಬಲಿ

ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಬರೋಬ್ಬರಿ 269ಕ್ಕೆ ಏರಿಕೆ.

Comments are closed.