ಕರಾವಳಿ

ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ : ಮನೆಯಲ್ಲೇ ಹಬ್ಬ ಆಚರಿಸುವಂತೆ ಡಿಸಿ ಕರೆ

Pinterest LinkedIn Tumblr

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಮನೆಯಲ್ಲಿ ಗಣೇಶೋತ್ಸವ ಆಚರಣೆ ಮಾಡಬೇಕು, ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿ‌ದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಪಾರಂಪರಿಂಕವಾಗಿ ಪ್ರತೀ ವರ್ಷವೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದೇ ರೀತಿ ಜಿಲ್ಲೆಯಲ್ಲಿ ಈ ಬಾರಿ ಆಗಸ್ಟ್. 22ರಂದು ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ.

ಆದರೆ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಾಹಣಾ ಪ್ರಾಧಿಕಾರದ ನಿರ್ದೇಶನದನ್ವಯ ಆಗಸ್ಟ್ 31ರವರೆಗೆ ಕಂಟೈನ್ ಮೆಂಟ್ ವಲಯಗಳಲ್ಲಿ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಲು ಹಾಗೂ ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಪುನ: ಆರಂಭಿಸಲು ತೆರವು -3 ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಕೆಲವೊಂದು ನಿಬಂಧನೆಗಳಿಗೊಳಪಟ್ಟು ಮುಂಜಾಗೃತ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವನ್ನು ಆಚರಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲಾಗಿದೆ. ಈ ವರ್ಷ ಕೊರೊನಾ ಕಾರಣದಿಂದಾಗಿ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ ಅಥವಾ ತಮ್ಮ ಮನೆಯಲ್ಲಿಯೇ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂತಿ ಪ್ರತಿಷ್ಟಾಪನೆ ಮಾಡಲು ಅವಕಾಶವಿಲ್ಲ. ಹಾಗೆಯೇ ಸಾರ್ವಜನಿಕ ನದಿ, ಕೆರೆ, ಬಾವಿ, ಕೊಳ ಹಾಗೂ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ. ಇನ್ನು ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಹಾಗೆಯೇ ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿ‌ದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಇನ್ನು ಗಣೇಶೋತ್ಸವ ಆಚರಣೆ ಮಾಡುವ ಎಲ್ಲಾ ದೇವಾಲಯಗಳಲ್ಲಿ ಪ್ರತಿದಿನ ಸ್ಯಾನಿಟೈಸ್‌ ಮಾಡಬೇಕು. ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ ಸ್ಯಾನಿಟೈಝರ್‌ ಕಡ್ಡಾಯವಾಗಿ ಬಳಸಬೇಕು. ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಸರ್ಕಾರದ ಮಾರ್ಗಸೂಚಿಯನ್ವಯ ಕೆಲವೊಂದು ನಿಬಂಧನೆಗಳಿಗೊಳಪಟ್ಟು ಶ್ರೀಗಣೇಶ ಚತುರ್ಥಿ ಹಬ್ಬ ಆಚರಿಸುವ ಸಂದರ್ಭ ಯಾವುದೇ ಮಾರ್ಗಸೂಚಿಯ ಉಲ್ಲಂಘನೆಯಾದಲ್ಲಿ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Comments are closed.