ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಪಣಂಬೂರು ವಾರ್ಡಿನಲ್ಲಿ 23 ಲಕ್ಷ ರೂಪಾಯಿ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಮಂಗಳೂರು ಮಹಾನಗರ ಪಾಲಿಕೆ ಸಂಬಂಧಿಸಿದಂತೆ ತಣ್ಣೀರುಬಾವಿ ಚರ್ಚ್ ಬಳಿ ಮುಖ್ಯರಸ್ತೆ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಅನುದಾನದಿಂದ ಲೋಕೋಪಯೋಗಿ ಇಲಾಖೆಯಿಂದ 23 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಪ್ರವಾಸೋದ್ಯಮ ಹಾಗೂ ಸ್ಥಳೀಯರ ಬೇಡಿಕೆಯನುಸಾರ ಈ ಕಾಮಗಾರಿಗೆ ಹೆಚ್ಚಿನ ಗಮನ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳಿಸಲು ಹೆಚ್ಚು ಸಮಯಾವಕಾಶ ತೆಗೆದುಕೊಳ್ಳದೆ ಶೀಘ್ರವೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಮನಪಾ ಸದಸ್ಯೆ ಸುನೀತ, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಬಿಜೆಪಿ ಮುಖಂಡರಾದ ಭಾಸ್ಕರ್ ಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ, ಅರವಿಂದ್ ಬೆಂಗ್ರೆ, ವರದರಾಜ್, ದಯಾನಂದ, ಪುಷ್ಪರಾಜ್, ಶೇಖರ್,ಏಕನಾಥ್, ನವೀನ್, ರವಿರಾಜ್, ಧನುಷ್, ಮಿಲನ್, ಪ್ರೀತಮ್, ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು.
Comments are closed.