ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ನವದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ, ತಮ್ಮ ಖಡಕ್ ನಿರ್ಧಾರಗಳು ಮತ್ತು ಕಾರ್ಯವೈಖರಿ ಮೂಲಕ ‘ಕರ್ನಾಟಕ ಸಿಂಗಂ’ ಎಂಬ ಖ್ಯಾತಿ ಪಡೆದಿದ್ದರು. ನಂತರ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ಹೋಗಿದ್ದರು. ಈಗ ಸ್ವಂತ ಊರಿನಲ್ಲೇ ಇದ್ದು, ಅಲ್ಲೇ ಕೆಲಸ ಮಾಡಿ 2021ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ, ನಾನೂ ರಾಷ್ಟ್ರೀಯವಾದಿ. ಬಿಜೆಪಿ ತಮಿಳುನಾಡು ರಾಜಕೀಯಕ್ಕೆ ಹೊಸ ದಿಕ್ಕು ನೀಡಲಿದೆ ಎಂದಿದ್ದಾರೆ.

ಅಣ್ಣಾಮಲೈ ಮೂಲತಃ ತಮಿಳುನಾಡಿನ ಕರೂರು ಜಿಲ್ಲೆಯವರಾಗಿದ್ದು 2011ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಅವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ಉಡುಪಿ ಹಾಗೂ ಚಿಕ್ಕಮಗಳುರಿನಲ್ಲಿ ಎಸ್ಪಿ ಆಗಿ ಬಳಿಕ ಬೆಂಗಳೂರಿನಲ್ಲಿ ಡಿಸಿಪಿ ಆಗಿ ಸೇವೆ ಸಲ್ಲಿಸಿದ್ದರು.
Comments are closed.