ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಅಕ್ಷಯ್ ಶ್ರೀಧರ್ ನೇಮಕ

Pinterest LinkedIn Tumblr

ಮಂಗಳೂರು, ಆಗಸ್ಟ್. 25: ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಅವರು ಬುಧವಾರ ಅಧಿಕಾರ ಸ್ವೀಕರಿಸುವ ಸಾದ್ಗ್ಯತೆ ಇದೆ.

2017ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರು ಈ ಹಿಂದೆ ಸಹಾಯಕ ಆಯುಕ್ತರಾಗಿ, ಬೀದರ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು. ಎಲೆಕ್ಟ್ರಿಕಲ್ ಎಂಜಿನಿಯರ್‌ನಲ್ಲಿ ಪದವಿ ಪಡೆದಿರುವ ಅಕ್ಷಯ್ ಅವರು ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗುವ ಮುನ್ನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರು ಇತ್ತೀಚೆಗೆ ದಿಢೀರ್ ವರ್ಗಾವಣೆಗೊಂಡಿದ್ದರು. ತೆರವಾದ ಅವರ ಸ್ಥಾನಕ್ಕೆ ಸದ್ಯ ಬೀದರ್ ಉಪ ವಿಭಾಗದ ಸಹಾಯಕ ಆಯುಕ್ತರಾಗಿರುವ ಅಕ್ಷಯ್ ಶ್ರೀಧರ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ಮಂಗಳೂರು ಮನಪಾ ಆಯುಕ್ತರಾಗಿ ನೇಮಕಗೊಳಿಸಿ ಸರಕಾರ ಆದೇಶಿಸಿದೆ.

Comments are closed.