ಕರಾವಳಿ

“ಅಸ್ತಂಗತ ಛಂದೋಬ್ರಹ್ಮ” “ಡಾ. ಶಿಮಂತೂರು ನಾರಾಯಣ ಶೆಟ್ಟಿ” ವಿಧಿವಶ

Pinterest LinkedIn Tumblr

ಮಂಗಳೂರು, ಆಗಸ್ಟ್.26: ‘ಯಕ್ಷಗಾನಛಂದೋಂಬುಧಿ’ಯ ಗ್ರಂಥ ಕರ್ತ, ಯಕ್ಷಗಾನದ ಛಂದಸ್ಸಿನ ಬಗ್ಗೆ ಆಳವಾದ ಜ್ಞಾನ ಹೊಂದಿದ, ‘ಯಕ್ಷಗಾನ ನಾಗವರ್ಮ’ ಎಂದು ಖ್ಯಾತಿ ಹೊಂದಿರುವ, ನಿವೃತ್ತ ಶಿಕ್ಷಕ, ಪಾರ್ಥಿಸುಬ್ಬ ಪ್ರಶಸ್ತಿ ಪುರಸ್ಕೃತ ಹಾಗೂ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿದ್ದ ಶಿಮಂತೂರು ನಾರಾಯಣ ಶೆಟ್ಟಿ (87 ವರ್ಷ) ಇಂದು (26-08-2020) ನಿಧನ ಹೊಂದಿದರು.

ಯಕ್ಷಾಂಗಣ ಮಂಗಳೂರು, ಪಟ್ಲ ಫೌಂಡೇಷನ್ ಪ್ರಶಸ್ತಿ,ಉಡುಪಿ ಯಕ್ಷಗಾನ ಕಲಾರಂಗ ವತಿಯಿಂದ ಇವರಿಗೆ ಯಕ್ಷಗಾನ ಕ್ಷೇತ್ರದ ವಿಶಿಷ್ಠ ಸಾಧಕರಿಗೆ ನೀಡುವ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿಗಳನ್ಮು ನೀಡಿ ಗೌರವಿಸಲಾಗಿತ್ತು.

ದ.ಕ.ಜಿಲ್ಲಾ ಕ.ಸಾ.ಪ.ವತಿಯಿಂದ ಉಪ್ಪಿನಂಗಡಿಯಲ್ಲಿ ಜರಗಿದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅವರು ಅಧ್ಯಕ್ಷರಾಗಿದ್ದರು. ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಗಣೇಶ ಕೊಲೆಕಾಡಿ ಸೇರಿ ನೂರಾರು ಶಿಷ್ಯರನ್ನು ಕಲಾ ಕ್ಷೇತ್ರಕ್ಕೆ ನೀಡಿದ ಹಿರಿಮೆ ಇವರದ್ದು. ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ.

ಗಣ್ಯರ ಸಂತಾಪ:

ಅಗಲಿದ ದಿವ್ಯ ಚೇತನದ ಸದ್ಗತಿಗಾಗಿ ಪ್ರಾರ್ಥಿಸುತ್ತಾ ಹಿರಿಯ ಕಲಾವಿದ ಕುಂಬಳೆ ಸುಂದರ ರಾವ್,ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ, ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ, ಅಷ್ಟಾವಧಾನಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಶ್ರೀಕೃಷ್ಣ ಯಕ್ಷ ಸಭಾದ ಸುಧಾಕರ ರಾವ್ ಪೇಜಾವರ, ಮುಂಬಯಿ ಅಜೆಕಾರು ಕಲಾಭಿಮಾನಿ ಬಳಗದ ಅಜೆಕಾರು ಬಾಲಕೃಷ್ಣ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್, ಕದ್ರಿ ಹವ್ಯಾಸಿ ಬಳಗದ ಶರತ್ಕುಮಾರ್ ಕದ್ರಿ, ಡಾ.ದಿನಕರ ಎಸ್.ಪಚ್ಚನಾಡಿ ಸಂತಾಪ ಸೂಚಿಸಿದ್ದಾರೆ.

Comments are closed.