ಕರಾವಳಿ

ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ಮಹಾಸ್ಫೋಟ : 448 ಮಂದಿಯಲ್ಲಿ ಸೋಂಕು ಪತ್ತೆ

Pinterest LinkedIn Tumblr

ಮಂಗಳೂರು, ಆಗಸ್ಟ್.29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ಮಹಾಸ್ಫೋಟ ಗೊಂಡಿದ್ದು, 448 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದು ಜಿಲ್ಲೆಯಲ್ಲಿ ಇದವರೆಗೆ ಪತ್ತೆಯಾದ ಒಂದು ದಿನದ ಅತೀ ಹೆಚ್ಚು ಪಾಸಿಟಿವ್ ಸಂಖ್ಯೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹನ್ನೆರಡು ಸಾವಿರ ಸಮೀಪಿಸಿದೆ.

ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 448 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶುಕ್ರವಾರ ಸೋಂಕಿತರ ಸಂಖ್ಯೆ 11837ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ( 215 )ಮತ್ತೆ ಮುಂದುವರಿದಿದೆ.

ಶುಕ್ರವಾರದಂದು 293 ಮಂದಿ ಗುಣಮುಖರಾಗಿ ಅಸ್ಪತ್ರೆಗಳಿಂದ ಬಿಡುಗಡೆಗೊಂದಿದ್ದಾರೆ. ಆ ಮೂಲಕ 8973 ಮಂದಿ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ. ಪ್ರಸ್ತುತ ಜಿಲ್ಲೆಯ ಆಸ್ಪತ್ರೆಗಳಲ್ಲಿ ಹಾಗೂ ಹೋಂ ಐಸೋಲೇಷನ್ ನಲ್ಲಿ 2521 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ 91490 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 79653 ಮಂದಿಯ ವರದಿ ನೆಗೆಟಿವ್ ಆಗಿದೆ.

ಶುಕ್ರವಾರದಂದು ಪತ್ತೆಯಾದ ಸೋಂಕಿತರ ಪೈಕಿ 66 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 149 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 17 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 215 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ವಿದೇಶದಿಂದ ಬಂದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಶುಕ್ರವಾರ ಕೊರೊನಾ ಸೋಂಕಿಗೆ 6 ಮಂದಿ ಬಲಿ:

ಇನ್ನು ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 343ಕ್ಕೆ ಏರಿಕೆಯಾಗಿದೆ.

ಶುಕ್ರವಾರವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ಮಹಾಸ್ಫೋಟ

ಜಿಲ್ಲೆಯಲ್ಲಿ‌ ಶುಕ್ರವಾರ ಬರೋಬ್ಬರಿ 448 ಮಂದಿಗೆ ಕೊರೋನಾ ಪಾಸಿಟಿವ್

ಶುಕ್ರವಾರ ಮಂಗಳೂರಿನ 273, ಬಂಟ್ವಾಳದ 103, ಪುತ್ತೂರಿನ 27, ಬೆಳ್ತಂಗಡಿಯ 18, ಸುಳ್ಯದ 17 ಹಾಗೂ

ಹೊರ ಜಿಲ್ಲೆಯ 10 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 215 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಿಂದ 149 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 66 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 17 ಮಂದಿಗೆ ಕೊರೋನಾ ಪಾಸಿಟಿವ್

ವಿದೇಶದಿಂದ ಬಂದ ಒಬ್ಬರಿಗೆ ಕೊರೋನಾ ಪಾಸಿಟಿವ್

ಶುಕ್ರವಾರ ಜಿಲ್ಲೆಯಲ್ಲಿ 293 ಮಂದಿ ಗುಣಮುಖ

ಜಿಲ್ಲೆಯಲ್ಲಿ ಒಟ್ಟು 11,837 ಪಾಸಿಟಿವ್ ಕೇಸ್

ಜಿಲ್ಲೆಯಲ್ಲಿ ಒಟ್ಟು 2,521 ಆಕ್ವೀವ್ ಕೇಸ್

ಮಂಗಳೂರು‌ ನಗರದಲ್ಲೇ ಹೆಚ್ಚುತ್ತಿರುವ ಕೊರೋನಾ ಪಾಸಿಟಿವ್ ಹಾಗೂ ಸಾವು

ಜಿಲ್ಲೆಯಲ್ಲಿ ಶುಕ್ರವಾರ 6 ಮಂದಿ ಕೊರೋನಾ ಮಹಾಮಾರಿಗೆ ಬಲಿ

ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 343ಕ್ಕೆ ಏರಿಕೆ.

Comments are closed.