ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಕುಡ್ಪಾಡಿ ವರೆಗಿನ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಿಂದ ಕುಡ್ಪಾಡಿ ಅಂಡರ್ ಪಾಸ್ ವರೆಗಿನ ರಸ್ತೆ ಅಭಿವೃದ್ಧಿಗೆ 90 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಅನೇಕ ಮನೆಗಳಿದ್ದು ಓಡಾಟಕ್ಕೆ ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ ಈ ರಸ್ತೆಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಈ ಸಂದರ್ಭ ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ, ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅದ್ಯಕ್ಷರಾದ ಜಗದೀಶ್ ಶೆಟ್ಟಿ, ಸಾರ್ವಜನಿಕ ಆರೋಗ್ಯ,ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅದ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ಸುರೇಂದ್ರ ಜಪ್ಪಿನಮೊಗರು, ಭಾಸ್ಕರ್ ಚಂದ್ರ ಶೆಟ್ಟಿ, ಕಿರಣ್ ರೈ ಎಕ್ಕೂರು, ಸಂದೇಶ್ ಶೆಟ್ಟಿ, ವಸಂತ್ ಜೆ ಪೂಜಾರಿ, ದೀಪಕ್, ಪುಷ್ಪರಾಜ್, ಕೊರಗಪ್ಪ, ಶ್ಯಾಮ್ ಪ್ರಸಾದ್, ಪ್ರಾಣೇಶ್, ಸುಜಾತಾ, ಸವಿತಾ ಶೆಟ್ಟಿ, ಕರುಣಾಕರ್, ಪ್ರವೀಣ್ ಕುಮಾರ್, ರಾಮ್ ಪ್ರಸಾದ್, ನಾಗೇಶ್, ಜನಾರ್ದನ್, ರಾಜೇಂದ್ರ, ಜಗದೀಶ್ ತಾರ್ದೋಲ್ಯ, ಸುರೇಶ್ ಶೆಟ್ಟಿ, ರಾಜೇಶ್, ನಾರಾಯಣ್,ಯಶೋದರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Comments are closed.