ಕರ್ನಾಟಕ

ಮದ್ಯ ಪ್ರಿಯರಿಗೆ ‘ಕಿಕ್’ ಏರಿಸುವ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!

Pinterest LinkedIn Tumblr

ಬೆಂಗಳೂರು: ಕೇಂದ್ರ ಸರ್ಕಾರ ನಾಲ್ಕನೇ ಹಂತದ ಅನ್‍ಲಾಕ್‍ನಲ್ಲಿ ಕೆಲವು ನಿಬಂಧನೆಗಳನ್ನು ತೆಗೆದಿರುವ ಹಿನ್ನೆಲೆಯಲ್ಲಿ ಐದು ತಿಂಗಳಿನಿಂದ ಮುಚ್ಚಿದ್ದ ಬಾರ್, ರೆಸ್ಟೋರೆಂಟ್ ಮತ್ತು ಕ್ಲಬ್‍ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಳೆದ ಐದು ತಿಂಗಳಿನಿಂದ ಕೋವಿಡ್-19 ಹಿನ್ನೆಲೆಯಲ್ಲಿ ಮುಚ್ಚಿದ್ದ ಬಾರ್, ರೆಸ್ಟೋರೆಂಟ್ ಹಾಗೂ ಕ್ಲಬ್‍ಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ನಾಳೆ ಅಧೀಕೃತ ಆದೇಶ ಹೊರಬೀಳಲಿದೆ. ಸೆ.1ರಿಂದ ಅನ್ವಯವಾಗುವಂತೆ ರಾಜ್ಯಾದ್ಯಂತ ಕ್ಲಬ್, ಬಾರ್ ಆ್ಯಂಡ್ ರೆಸ್ಟೋರೆಂಟ್‍ಗಳು ತೆರೆಯಲಿವೆ.

ನಿನ್ನೆ ಸಂಜೆ ಕೇಂದ್ರ ಗೃಹ ಇಲಾಖೆ ಅನ್‍ಲಾಕ್ 4ನಲ್ಲಿ ಮೆಟ್ರೋ ರೈಲು, ಮದುವೆ ಸಮಾರಂಭ, ಸಾಂಸ್ಕ್ರತಿಕ ಕಾರ್ಯಕ್ರಮ ಆನ್‍ಲೈನ್ ಶಿಕ್ಷಣ ಸೇರಿದಂತೆ ಕೆಲವು ಚಟುವಟಿಕೆಗಳಿಗೆ ಹಾಕಲಾಗಿದ್ದ ನಿಬಂಧನೆಗಳನ್ನು ತೆರವುಗೊಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆರ್ಥಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಕ್ಲಬ್, ಬಾರ್ ಆ್ಯಂಡ್ ರೆಸ್ಟೋರೆಂಟ್‍ಗಳಿಗೂ ಅನುಮತಿ ನೀಡಲಿದೆ. ಅಬಕಾರಿ ಇಲಾಖೆಯ ಅಕಾರಿಗಳ ಪ್ರಸ್ತಾವನೆಗೆ ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿದ್ದಾರೆ ಎನ್ನಲಾಗಿದೆ.

ಆದರೆ ಕೆಲವೊಂದು ಷರತ್ತುಗಳನ್ನು ವಿಧಿಸಲಾಗಿದೆ. ಅದೇನೆಂದರೆ, ಶೇಕಡ 50ರಷ್ಟು ಗ್ರಾಹಕರೊಂದಿಗೆ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಾರ್ ಆ್ಯಂಡ್‌ ರೆಸ್ಟೋರೆಂಟ್ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಉದಾಹರಣೆಗೆ 4 ಜನ ಕುಳಿತು ಕುಡಿಯುವ ಸ್ಥಳದಲ್ಲಿ ಇನ್ನು ಮುಂದೆ 2 ಮಂದಿ ಮಾತ್ರ ಕುಳಿತುಕೊಳ್ಳಲು ಅವಕಾಶವಿದೆ. ಉಳಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಲಿದೆ.

Comments are closed.