
ಮಂಗಳೂರು. ಆಗಸ್ಟ್.30 : ದಕ್ಷಿಣ ಕನ್ನಡ ಜಿಲ್ಲೆಯ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಕೊರೋನಾ ಪಾಸಿಟಿವ್ ಆಗಿರುವ ಬಗ್ಗೆ ನಳಿನ್ ಕುಮಾರ್ ಕಟೀಲ್ ಖಚಿತಪಡಿಸಿದ್ದಾರೆ.
ಈ ಬಗ್ಗೆ ಅವರು ಟಿಟರ್ ನಲ್ಲಿ ”ನಾನು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಪ್ರಮುಖ ಅಂಶಗಳು:
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕೊರೋನಾ ಪಾಸಿಟಿವ್
ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ
ಕೊರೋನಾ ಪಾಸಿಟಿವ್ ವರದಿ ಖಚಿತಪಡಿಸಿದ ನಳಿನ್
ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲು
ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ನಳಿನ್
ಯಾವುದೇ ರೋಗ ಲಕ್ಷಣಗಳಿಲ್ಲ – ನಳಿನ್
ನಿಮ್ಮ ಆಶೀರ್ವಾದದಿಂದ ಶೀಘ್ರವೇ ಹಿಂತಿರುಗುತ್ತೇನೆ
ಸಂಪರ್ಕದಲ್ಲಿದ್ದವರಿಗೆ ಜಾಗರೂಕತೆ ತಿಳಿಸಿದ ನಳಿನ್
ದಕ್ಷಿಣ ಕನ್ನಡ ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್.
Comments are closed.