
ನವದೆಹಲಿ, ಆಗಸ್ಟ್ 31: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಕೊರೋನಾ ವೈರಸ್ ಹಿನ್ನೆಲೆಯಿಂದಾಗಿ ಐದು ತಿಂಗಳಿಂದ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಅದನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ.
ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಈ ಹಿಂದೆಯೇ ಸರ್ಕಾರದ ವಂದೇ ಭಾರತ್ ಮಿಷನ್ ಮೂಲಕ ಹಾರಾಟ ನಡೆಸುತ್ತಿದ್ದ ವಿಮಾನಗಳು ಎಂದಿನಂತೆ ಹಾರಾಡಲಿವೆ ಹಾಗೂ ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ. ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟೀಕರಿಸಿದೆ.
ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್ 25ರಂದು ಪ್ರಧಾನಿಯವರು ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲು ಆದೇಶ ನೀಡಿದ್ದರು. ಮೇ 25ರಿಂದ ದೇಶೀಯ ವಿಮಾನ ಹಾರಾಟ ಆರಂಭವಾದರೆ, ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಮುಂದೂಡಲಾಗಿತ್ತು.
Comments are closed.