ಕರಾವಳಿ

ಮಂಗಳೂರಿನ ಬೀಚ್‌ಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ : ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು : ಮಂಗಳೂರಿನ ಬೆಂಗ್ರೆ ಪ್ರದೇಶದಲ್ಲಿರುವ ತಣ್ಣೀರುಬಾವಿ ಬೀಚ್ ಅಭಿವೃದ್ಧಿ ಪಡಿಸುವ ಕುರಿತು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ತಣ್ಣೀರುಬಾವಿ ಬೀಚ್ ಪರಿಸರಕ್ಕೆ ಮಂಗಳೂರು ಉತ್ತರ (ಸುರತ್ಕಲ್ ) ಶಾಸಕ ಡಾ.‌ಭರತ್ ಶೆಟ್ಟಿ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬೀಚ್ ನಲ್ಲಿ ಪ್ರವಾಸಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಸ್ತ್ರತ ಯೋಜನಾ ವರದಿ ತಯಾರಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಕಡಲ ಕಿನಾರೆಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಶಾಸಕ ಡಾ. ಭರತ್ ಶೆಟ್ಟಿ ಅವರು ಬೀಚ್ ಅಭಿವೃದ್ಧಿ ಬಗ್ಗೆ ಪೂರಕ ಮಾಹಿತಿಗಳನ್ನು ನೀಡಿದರು. ಸಂಬಂಧಿತ ಜನಪ್ರತಿನಿದಿಗಳು ಹಾಗೂ ಇತರ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

Comments are closed.