ಕರಾವಳಿ

ಸೆ.1 (ನಾಳೆಯಿಂದ) ದೇವಸ್ಥಾನಗಳಲ್ಲಿ ಅನ್ನದಾಸೋಹ ಹೊರತುಪಡಿಸಿ ಎಲ್ಲಾ ಸೇವೆ ಆರಂಭ

Pinterest LinkedIn Tumblr

ಉಡುಪಿ: ಸೆಪ್ಟೆಂಬರ್ 1 ರಿಂದ (ನಾಳೆ) ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭ ಆಗಲಿದೆ. ಅನ್ನ ಪ್ರಸಾದ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ದೇಗುಲದಲ್ಲಿ ಎಲ್ಲಾ ಸೇವೆ ಆರಂಭಿಸಲು ಅನುಮತಿ ಕೋರಿ ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ. ಸರ್ಕಾರದಿಂದ ಅಧಿಕೃತ ಮಾಹಿತಿ ಮತ್ತು ಅನುಮತಿ ಬರಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾಮಾಜಿಕ ಅಂತರ ಕಾಪಾಡುವ ಸೇವೆಗೆ ಮುಕ್ತ ಅವಕಾಶ ಇದೆ. ಕೊಲ್ಲೂರಿನ ಚಿನ್ನದ ರಥ ಸೇವೆ, ಬೆಳ್ಳಿರಥ ಸೇವೆ ಹೇಗೆ ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ. ಕೋವಿಡ್-19 ಗೈಡ್ ಲೈನ್ ಅಡಿಯಲ್ಲೇ ಎಲ್ಲಾ ಸೇವೆ ಆರಂಭವಾಗುತ್ತದೆ ಎಂದು ಹೇಳಿದರು.

ನೂರಾರು, ಸಾವಿರಾರು ಜನ ಸೇರಿ ಕೊಡುವ ಸೇವೆ ಸದ್ಯಕ್ಕೆ ಸಾಧ್ಯವಿಲ್ಲ. ಅಂತಹ ಸೇವೆಯನ್ನು ಹತ್ತು-ಹದಿನೈದು ಜನರು ಮಾಡಲು ಸಾಧ್ಯವೇ ಎಂಬ ಚಿಂತನೆ ನಡೆಸುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Comments are closed.