
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ಬೆಂಗಳೂರಿನ ಯಲಹಂಕದ ಜ್ಯುಡಿಷಿನಲ್ ಲೇಔಟ್ ನಲ್ಲಿರುವ ನಟಿ ರಾಗಿಣಿ ಅಪಾರ್ಟ್ ಮೆಂಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿರುವ ಆರು ಮಂದಿ ಸಿಸಿಬಿ ಅಧಿಕಾರಿಗಳು ರಾಗಿಣಿ ಅಪಾರ್ಟ್ ಮೆಂಟ್ ನಲ್ಲಿ ಸತತ 3 ಗಂಟೆಗಳ ಶೋಧ ಕಾರ್ಯ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗುರುವಾರ ರಾಗಿಣಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ರಾಗಿಣಿಗೆ ಮನೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಯ ಇಡೀ ಮನೆಯನ್ನು ತಪಾಸಣೆ ನಡೆಸಿದ ಬಳಿಕ ಮನೆ ಕೀ, ಕಾರು ಕೀ, ಮೊಬೈಲ್ ಅನ್ನು ವಶಕ್ಕೆ ಪಡೆದು ರಾಗಿಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Comments are closed.