ಕರಾವಳಿ

ನಾಳೆ ಡಿಜಿಪಿ ಪ್ರವೀಣ್ ಸೂದ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಭೇಟಿ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್.07: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸೆ.8ರಂದು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ನಾಳೆ ಬೆಳಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್ ಕಚೇರಿಗೆ ಆಗಮಿಸುವ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಆ ಬಳಿಕ ಉಡುಪಿಗೆ ತೆರಳಿ ಅಲ್ಲಿಯೂ ಸಭೆ ನಡೆಸಿ, ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡುವರು. ಸೆ.9ರಂದು ಬೆಂಗಳೂರಿಗೆ ಹಿಂದಿರುಗುವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

Comments are closed.