ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಕುದ್ಮುಲ್ ರಂಗರಾವ್ ಅವರು ಹಿಂದುಳಿದ ವರ್ಗ ಮತ್ತು ಶೋಷಿತ ವರ್ಗದವರ ಪರ ಧ್ವನಿ ಎತ್ತಿದ ಮಹಾನ್ ಸಾಧಕರು, ಅವರು ಸರ್ವರಿಗೂ ಆದರ್ಶ. ಅವರ ತತ್ತ್ವದಡಿ ಪ್ರತಿಯೊಬ್ಬರೂ ಬದುಕಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಅವರು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರ ನೇತ್ರತ್ವದಲ್ಲಿ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಕುದ್ಮುಲ್ ರಂಗರಾವ್ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಕುದ್ಮುಲ್ ರಂಗರಾವ್ ಅವರು ತಮ್ಮಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿದ್ದರು. 19ನೇ ಶತಮಾನದಲ್ಲಿ ಬಹಳಷ್ಟು ಕಷ್ಟದ ಪರಿಸ್ಥಿಯಲ್ಲಿದ್ದ ಹಿಂದುಳಿದ ವರ್ಗ ಮತ್ತು ಶೋಷಿತ ವರ್ಗದವರ ಪರ ಅವರ ಅಭಿವೃದ್ಧಿಗೆ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿದವರು. ಅಂತಹ ಇಬ್ಬರು ಮಹಾನ್ ಮಾನವಾತವಾದಿಗಳ ತತ್ವವನ್ನು ಕಾಂಗ್ರೆಸ್ ಪಕ್ಷ ಪಾಲಿಸುತ್ತಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಮೇಯರ್ ಗಳಾದ (ಹಾಲಿ ಕಾರ್ಪೊರೇಟರ್) ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಭಾಸ್ಕರ್ ಕೆ., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ್, ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಕಾಂಗ್ರೆಸ್ ನ ಹಿಂದೂಳಿದ ವರ್ಗಗಳ ಮುಖಂಡ ಸದಾಶಿವ ಉಳ್ಳಾಲ, ಪ್ರಮುಖರಾದ ಸಲೀಂ, ಕಳ್ಳಿಗೆ ತಾರಾನಾಥ ಶೆಟ್ಟಿ, ಡಾ| ರಘು, ವಿನಯರಾಜ್, ಪದ್ಮನಾಭ ಆಮೀನ್, ಶಂಕರ್ ಕೆ. ಸುವರ್ಣ, ಶಾಂತಲಾ ಗಟ್ಟಿ, ಝೀನತ್ ಸಂಶುದ್ಧೀನ್, ಪ್ರಕಾಶ್ ಸಾಲ್ಯಾನ್, ನವೀನ್ ಡಿ’ಸೊಜಾ, ಅನಿಲ್, ರಮಾನಂದ ಪೂಜಾರಿ, ಡಾ| ಬಿ.ಜಿ. ಸುವರ್ಣ, ಪ್ರವೀಣ್ ಚಂದ್ರ ಆಳ್ವ,ಉಮೇಶ್ ದಂಡಕೇರಿ, ಪುರುಷೋತ್ತಮ ಚಿತ್ರಾಪುರ, ಸಂಶುದ್ಧೀನ್ ಹಾಗೂ ಮತ್ತಿತ್ತರ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಘಟಕಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಘುರಾಜ್ ಕದ್ರಿ ಕಾರ್ಯಕ್ರಮ ನಿರೂಪಿಸಿದರು.
Comments are closed.