
ಮಂಗಳೂರು ಸೆಪ್ಟಂಬರ್.10: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆ ಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇರುತ್ತದೆ.
ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸೆ.10ರಂದು ಆರೆಂಜ್ ಆಲರ್ಟ್, ಹಾಗೂ ಸೆ.11ರಿಂದ 12ರ ವರೆಗೆ ರೆಡ್ ಆಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲೆಯ ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆ ಗಳನ್ನು ನೀಡಿದೆ.

ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು, ಈ ಅವಧಿಯಲ್ಲಿ ಮಕ್ಕಳು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವೂದೇ ಸಮಸ್ಯೆಗಳಿಗೆ (ತುರ್ತು ಸೇವೆಗೆ) ಇಲ್ಲಿ ಕೊಟ್ಟಿರುವ 24 x 7 ಕಂಟ್ರೋಲ್ ರೂಂ, ಶುಲ್ಕ ರಹಿತ 1077, ಅಥವಾ ಮೊಬೈಲ್ ಸಂಖ್ಯೆ: 9483908000 ಅನ್ನು ಸಂಪರ್ಕಿಸು ವಂತೆ ದ.ಕ. ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.