ಕರಾವಳಿ

ಮುಜರಾಯಿ ಇಲಾಖೆ ಗ್ರೀನ್ ಸಿಗ್ನಲ್ : ಷರತ್ತುಗಳೊಂದಿಗೆ ಕುಕ್ಕೆ ಸುಬ್ರಮಣ್ಯದಲ್ಲಿ ಸೇವೆಗಳು ಪುನರಾರಂಭ

Pinterest LinkedIn Tumblr

ಸುಬ್ರಮಣ್ಯ,: ಕೊರೋನವೈರಸ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಪ್ರಸಿದ್ದ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಸೇವೆಗಳನ್ನು ಮತ್ತೆ ಪುನರಾರಂಭಗೊಳಿಸಲು ಮುಜರಾಯಿ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಇಂದಿನಿಂದ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ಆರಂಭವಾಗಲಿದೆ. ಆದರೆ ಕೊರೋನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಕೆಲವೊಂದು ಷರತ್ತುಗಳು ಅನ್ವಯವಾಗಲಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.

ದೇವಾಲಯದಲ್ಲಿ ‌ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆ ಇರುತ್ತದೆ.
ದೇವಾಲಯ ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು ಸಂಜೆ 3.30 ರಿಂದ ರಾತ್ರಿ 8ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ.

ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಮುಂತಾದ ಸೇವೆ ನಡೆಸಲು ಅವಕಾಶ.

ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆಯಲ್ಲಿ ಇಬ್ಬರಿಗೆ ಮಾತ್ರ ಒಂದು ಟಿಕೆಟ್​ನಲ್ಲಿ ಸೇವೆಯಲ್ಲಿ ಭಾಗವಹಿಸಲು ಅವಕಾಶವಿದೆ.

ಮಹಾಪೂಜೆ ಮತ್ತು ಪಂಚಾಮೃತ ಸೇವೆಯ ಹತ್ತು ಟಿಕೆಟ್ ಗಳನ್ನು ಮಾತ್ರ ವಿತರಿಸಲಾಗುವುದು.

ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನಡೆಸುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗಿದೆ.

Comments are closed.