ಬೆಂಗಳೂರು: ಶ್ರೀಲಂಕಾದಲ್ಲಿ ಶೇಖ್ ಫೈಸಲ್ ಆಯೋಜನೆ ಮಾಡುತ್ತಿದ್ದ ಪಾರ್ಟಿಗಳಿಗೆ ಐಂದ್ರಿತಾ ರೇ ಆಹ್ವಾನ ನೀಡುತ್ತಿದ್ದರು. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಜಾಲದ ನಂಟಿನ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಬರಬೇಕು ಎಂದು ನೋಟಿಸ್ನಲ್ಲಿ ಜಾರಿ ಮಾಡಲಾಗಿದೆ.

Comments are closed.