ಶ್ರೀನಗರ,ಸೆ.17: ನಗರದ ಫಿರ್ದೌಸಾಬಾದ್ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹಾಗೂ ಓರ್ವ ಸ್ಥಳೀಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ, ಓರ್ವ ಅಧಿಕಾರಿ ಸೇರಿದಂತೆ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ನೆಲೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬಟಮಲೂ ಪ್ರದೇಶದ ಫಿರ್ದೌಸಾಬಾದ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಸುಮಾರು 2:30ರಿಂದ ಆರಂಭಿಸಿತ್ತು. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್ ಆಗಿ ಬದಲಾಯಿತು.
ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉಗ್ರರ ವಿರುದ್ದ ಕಾರ್ಯಾಚರಣೆಯು ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
Comments are closed.