
ಮಂಗಳೂರು, ಸೆಪ್ಟಂಬರ್. 20: ಕರಾವಳಿ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಲೆನಾಡಿನ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕದ ಕರಾವಳಿಯ ಹಲವೆಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ಥವ್ಯಸ್ಥವಾಗಿದೆ.
ದಕ್ಷಿಣ ಕನ್ನಡ, ಮಂಗಳೂರು ಗಡಿಭಾಗದಲ್ಲಿ ಮಳೆಯ ಆರ್ಭಟಕ್ಕೆ ನಂದಿ, ಶಾಂಭವಿ ನದಿ ಉಕ್ಕಿ ಹರಿಯುತ್ತಿದ್ದು, ಕಿನ್ನಿಗೋಳಿ ಸಮೀಪದ ತಗ್ಗುಪ್ರದೇಶ ಜಲಾವೃತಗೊಂಡಿದೆ. ಪರಿಣಾಮ ಕಿನ್ನಿಗೊಳಿ, ಕಿಲೆಂಜೂರು, ಪಂಜ, ಬಳ್ಕುಂಜೆಯಲ್ಲಿ ನೂರಾರು ಎಕರೆ ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ವರುಣನ ಆರ್ಭಟಕ್ಕೆ ದ.ಕ. ಜಿಲ್ಲೆ ಸಂಪೂರ್ಣ ತತ್ತರಗೊಂಡಿದ್ದು, ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳ ಹಲವು ಕಡೆಗಳಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕೆಸರು ನೀರು ನಿಂತಿದ್ದು, ವಾಹನ ಸಂಚಾರಕ್ಕೂ ಅಡಚಣೆಯುಂಟಾಗಿದೆ. ಅಲ್ಲದೇ ಮಳೆ ನೀರು ನಿಂತು ರಸ್ತೆಗಳು ಜಲಾವೃತವಾಗಿದ್ದು, ಸಾರ್ವಜನಿಕರು ನಡೆದಾಡಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯಾದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, , ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Comments are closed.