ಉಡುಪಿ: ಉಡುಪಿ ಜೆಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಚರ್ಚಿಸಿ ಅಗತ್ಯದ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಉಡುಪಿಯಲ್ಲಿ ಪ್ರವಾಹದ ಭೀತಿಯಿರುವ ಕಾರಣದಿಂದ ಇನ್ನು ಹೆಚ್ಚಿನ ವಿಪತ್ತು ಪರಿಹಾರ ಕಾರ್ಯಪಡೆಯನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಟಿ. ಎಂ ವಿಜಯ ಭಾಸ್ಕರ್ ಅವರೊಂದಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಕೇಳಿಕೊಂಡಿದ್ದಾರೆ, ಇದಕ್ಕೆ ಪ್ರತಿಯಾಗಿ ಈಗಾಗಲೇ ಮಂಗಳೂರಿನಿಂದ ಒಂದು NDRF ತಂಡವನ್ನು ಕಳುಹಿಸಲಾಗಿದೆ, ಈ ತಂಡ ಅಪಾಯದ ಪ್ರದೇಶದಲ್ಲಿರುವ ಜನರ ಸಹಾಯ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ಇನ್ನೊಂದು 20 ಜನರನ್ನೊಳಗೊಂಡ NDRF ತಂಡವನ್ನು ಮೈಸೂರಿನಿಂದ ಇದಿಗಲೇ ಕಳುಹಿಸಿಕೊಡಲಾಗಿದೆ ಹಾಗು ಸಂಸದರ ಬೇಡಿಕೆಯ ಮೇರೆಗೆ ರಕ್ಷಣಾ ಕಾರ್ಯಕ್ಕೆ ಹೆಲಿಕಾಪ್ಟರ್ ಗಳು ಕೂಡಾ ಕೆಲವೇ ಗಂಟೆಗಳಲ್ಲಿ ಕಳುಹಿಸಿಕೊಡಲಾಗಿದೆ. ಬೆಂಗಳೂರು ಹಾಗೂ ಕಾರವಾರ ಕೇಂದ್ರದಿಂದ ಹೆಲಿಕಾಪ್ಟರ್ ಗಳನ್ನು ರಕ್ಷಣಾ ಕಾರ್ಯಕ್ಕಾಗಿ ಕಳುಹಿಸಿ ಕಳುಹಿಸಿಕೊಡುವುದಾಗಿ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಈ ಹೆಲಿಕಾಪ್ಟರ್ ಗಳು ಕೆಲವೇ ಗಂಟೆಗಳಲ್ಲಿ ಉಡುಪಿಯಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯದಲ್ಲಿ ಭಾಗಿಯಗಲಿವೆ ಎಂದು ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿರುತ್ತಾರೆ.
ಗೃಹ ಸಚಿವ ಬೊಮ್ಮಾಯಿ ಸ್ಪಂದನೆ..
ಧಾರಕಾರ ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಈಗಾಗಾಲೇ ಎಸ್.ಡಿ.ಆರ್.ಎಫ್ ತಂಡ ಜಿಲ್ಲೆಗೆ ಆಗಮಿಸಿ ಪ್ರವಾಹ ಪೀಡಿತರ ರಕ್ಷಣೆಯಲ್ಲಿ ತೊಡಗಿಸಿಕೊಂಡಿದೆ. ಎನ್.ಡಿ.ಆರ್.ಎಫ್ ತಂಡ ಕೆಲ ಹೊತ್ತಲ್ಲೇ ಆಗಮಿಸಲಿದ್ದು ಹೆಲಿಕಾಪ್ಟರ್ ಮೂಲಕ ರಕ್ಷಣೆಯ ಕಾರ್ಯ ಮಾಡಲು ಹೆಲಿಕಾಪ್ಟರ್ ತರಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Comments are closed.