ಕರಾವಳಿ

ಬಾಯ್ತೆರೆದು ಬಿರುಕು ಬಿಟ್ಟಿದೆ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66 ಅರಾಟೆ ಸೇತುವೆ..!

Pinterest LinkedIn Tumblr

ಕುಂದಾಪುರ: ಬೈಂದೂರು-ಕುಂದಾಪುರ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ನೂತನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ‌. ಚತುಷ್ಪತ ಕಾಮಗಾರಿ ಗುತ್ತಿಗೆ ಪಡೆದ ಐ.ಆರ್.ಬಿ. ಕಂಪೆನಿಯ ಕಳಪೆ ಕಾಮಗಾರಿಗೆ ಜನರು ಆಕ್ರೋಷ ವ್ಯಕ್ತಪಡಿಸಿದ್ದಾರೆ.

 

ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ಸೇತುವೆಯಲ್ಲಿ ಸಂಪೂರ್ಣ ಬಿರುಕು ಕಾಣಿಸಿಕೊಂಡಿದೆ. ಇದು ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ನಡೆದ ಕಾಮಗಾರಿ ಆಗಿದ್ದು ಸಂಚಾರಕ್ಕೆ ಮುಕ್ತವಾಗಿತ್ತು. ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ವಾಹನಗಳಿಗೆ ಈ ಸೇತುವೆಯಲ್ಲಿ ಮತ್ತು ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುವ ವಾಹನಗಳಿಗೆ ಹಳೇ ಸೇತುವೆಯಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿತ್ತು. ಸದ್ಯ ಸೇತುವೆ ಪಿಲ್ಲರ್ ಮೇಲ್ಬಾಗದ ರಸ್ತೆ ಬಾಯ್ತೆರೆದು ಅಪಾಯಕ್ಕೆ ಆಹ್ವಾನಿಸುತ್ತಿದೆ. ಇನ್ನು ಈ ಸೇತುವೆ ರಾಜ್ಯದ ಎರಡನೇ ಅತೀ ದೊಡ್ಡ ಸೇತುವೆಯಾಗಿದೆ.

ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಬಿರುಕು ಬಿಟ್ಟ ಸೇತುವೆ ಪರಿಶೀಲನೆ ನಡೆಸಿದ್ದಾರೆ. ಹೊಸ ಸೇತುವೆಯಲ್ಲಿ ಬಿರುಕು ಕಂಡುಬಂದ ಹಿನ್ನಲೆಯಲ್ಲಿ ಈಗ ಹಳೆಯ ಸೇತುವೆ ಮೂಲಕ ಎರಡು ಕಡೆಗಳ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೊಸಾಡು ಗ್ರಾಮ ಪಂಚಾಯತ್ ಗ್ರಾಮಲೆಕ್ಕಾಧಿಕಾರಿ ಅನಿಲ್ ಸ್ಥಳಕ್ಕೆ ಭೇಟಿ ಕೊಟ್ಟರು.

(ವರದಿ- ಯೋಗೀಶ್ ಕುಂಭಾಸಿ)

Comments are closed.