ಕರಾವಳಿ

ಮುಂಬೈಯಿಂದ ಮಂಗಳೂರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿ ಸೆರೆ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್. 28: ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮಂಗಳೂರಿನ ನಗರ ಅಪರಾಧ ಪತ್ತೆದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಸುರತ್ಕಲ್ ಸೂರಿಂಜೆ ನಿವಾಸಿ ಮುಹಮ್ಮದ್ ಶಾಕೀರ್ (35) ಎಂಬಾತನನ್ನು ಬಂಧಿಸಿರುವ ಪೊಲೀಸರು ಬಂಧಿತ ಆರೋಪಿಯಿಂದ ಸುಮಾರು 27 ಸಾವಿರ ರೂ. ಅಧಿಕ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈಗಾಗಲೇ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಖ್ಯಾತ ಡ್ಯಾನ್ಸರ್, ಕೊರಿಯಾಗ್ರಾಫರ್ ಕಿಶೋರ್ ಅಮನ್ ಹಾಗೂ ಅಖೀಲ್ ನೌಶೀಲ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಜೊತೆಗೆ ಇನ್ನೊರ್ವ ಕೊರಿಯಾಗ್ರಾಫರ್ ತರುಣ್‌ರಾಜ್ ಹಾಗೂ ಮಣಿಪುರದ ಆಸ್ಕಾ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಿಶೋರ್ ಅಮನ್ ಹಾಗೂ ಅಕೀಲ್ ನೌಶೀಲ್ ಎಂಬವರು ವಿಚಾರಣೆ ವೇಳೆ ಶಾಕೀರ್ ಇವರಿಗೆ ಮುಂಬೈನಿಂದ ಡ್ರಗ್ಸ್ ತಂದು ಕೊಡುವುದಾಗಿ ಬಾಯಿಬಿಟ್ಟಿದ್ದರು. ಈ ಮಾಹಿತಿ ಹಿನ್ನೆಲೆಯಲ್ಲಿ ಶಾಕೀರ್‌ನ ಬಂಧನವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Comments are closed.