ಕರಾವಳಿ

ಬರೋಬ್ಬರಿ 6 ತಿಂಗಳ ಬಳಿಕ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಭಕ್ತರಿಗೆ ಅವಕಾಶ..!

Pinterest LinkedIn Tumblr

ಉಡುಪಿ: ಕೊರೋನಾ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿಷೇಧವಿದ್ದ ಶ್ರೀಕೃಷ್ಣ ಮಠದಲ್ಲಿ ಸುಮಾರು ಆರು ತಿಂಗಳ ಬಳಿಕ ಸೋಮವಾರ ಭಕ್ತರ ಪ್ರವೇಶ ಆರಂಭಗೊಂಡಿದ್ದು ನಿಗದಿತ ಸಮಯದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶ್ರೀಕೃಷ್ಣ ಮಠದಲ್ಲಿ, ದೇವರ ದರ್ಶನಕ್ಕೆ ಅವಕಾಶ ಕಲ್ಪಿಸುವದಕ್ಕಾಗಿ ಮಾಡಿದ ವಿಶೇಷ ದಾರಿಯನ್ನು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥರು, ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರಿವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರೊಂದಿಗೆ ಶ್ರೀಕೃಷ್ಣ ದೇವರ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಿ ಅನುಗ್ರಹ ಸಂದೇಶ ನೀಡಿದರು. ಸೋಮವಾರದಿಂದ ಭಕ್ತಾದಿಗಳಿಗೆ ನಿಗದಿತ ಸಮಯದಲ್ಲಿ(ಮಧ್ಯಾಹ್ನ 2 ಘಂಟೆಯಿಂದ 5 ರ ತನಕ) ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಿದ ಬಳಿಕ ಮೊದಲ ದಿನವಾದ ಸೋಮವಾರದಂದು ಸುಮಾರು 1,000ಕ್ಕೂ ಅಧಿಕ ಭಕ್ತರು ದರ್ಶನ ಪಡೆದರು. ಪರಸ್ಥಳದ ಭಕ್ತರ ಮಾರ್ಗದರ್ಶನಕ್ಕಾಗಿ ಎರಡು ಕೌಂಟರ್‌ಗಳನ್ನು ತೆರೆಯಲಾಗಿದೆ. ಸ್ಥಳೀಯ ಭಕ್ತರಿಗೆ ರಥಬೀದಿ ಎದುರು ಭಾಗದಿಂದ ದರ್ಶನಕ್ಕೆ ಬಿಡಲಾಗುತ್ತಿದೆ

Comments are closed.