ಕರಾವಳಿ

ಕುಂದಾಪುರ-ಬೈಂದೂರು ಸಂಪರ್ಕದ ಅರಾಟೆ ಸೇತುವೆ ಮೂಲ ರಚನೆಯಲ್ಲಿ ದೋಷವಿಲ್ಲ: ಉಡುಪಿ ಡಿಸಿ

Pinterest LinkedIn Tumblr

ಉಡುಪಿ: ಕುಂದಾಪುರದಿಂದ ಕಾರವಾರದವರೆಗಿನ ರಾಷ್ಟ್ರೀಯ ಹೆದ್ದಾರಿ 66 ರ ಚತುಷ್ಪಥ ರಸ್ತೆಯನ್ನು ಐ.ಆರ್.ಬಿ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿದ್ದು, ಇದರ ಭಾಗವಾಗಿ ಮುಳ್ಳಿಕಟ್ಟೆ ಅರಾಟೆ ಎಂಬಲ್ಲಿ ಸೇತುವೆಯನ್ನು ಸಹ ನಿರ್ಮಿಸಲಾಗಿದೆ.

ನಿರ್ಮಾಣಗೊಂಡ ಮೂರೇ ವರ್ಷಗಳಲ್ಲಿ ಬೈಂದೂರು-ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66 ಮುಳ್ಳಿಕಟ್ಟೆ ಅರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುತ್ತದೆ ಎಂದು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು ಈ ಬಗ್ಗೆ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿರುತ್ತದೆ. ಈ ಬಗ್ಗೆ ಸ್ಥಳ ಪರಿಶೀಲನೆಗೆ ತಾಂತ್ರಿಕ ತಜ್ಞರ ಸಮಿತಿಗೆ ಸೂಚಿಸಲಾಗಿತ್ತು.

ಬಿರುಕು ಕಾಣಿಸಿಕೊಂಡಿರುವುದರ ಬಗ್ಗೆ ತಾಂತ್ರಿಕ ತಜ್ಞರ ಸಮಿತಿಯು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದು, ವರದಿಯಂತೆ ಸೇತುವೆ ರಚನೆಯಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಸೇತುವೆಯ ಮೇಲ್ಬಾಗದಲ್ಲಿ ಮಾತ್ರ ಬಿರುಕು ಕಂಡು ಬಂದಿದ್ದು, ಸ್ವಾನ್ ಜಾಯಿಂಟ್ ನಲ್ಲಿ ಕಂಡು ಬಂದಿರುವುದರಿಂದ ಅಪಾಯವಿಲ್ಲ ಹಾಗೂ ಸೇತುವೆ ಮೂಲ ರಚನೆಯಲ್ಲಿ ಯಾವುದೇ ದೋಷವಿಲ್ಲ ಎಂದು ತಿಳಿದುಬಂದಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Comments are closed.