ಕರ್ನಾಟಕ

10ನೇ ಬಾರಿಯ ಪರೀಕ್ಷೆಯಲ್ಲಿ ಶಾಸಕ ರೇಣುಕಾಚಾರ್ಯಗೆ ಕೋವಿಡ್ ಶಾಕ್; ಸಿಎಂ ಬಿ.ಎಸ್.ವೈ ಹೇಳಿದ್ದೇನು?

Pinterest LinkedIn Tumblr

ಬೆಂಗಳೂರು: ಹೊನ್ನಾಳಿ ಶಾಸಕ, ಎಂಪಿ ರೇಣುಕಾಚಾರ್ಯ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮಂಗಳವಾರದ ಬೆಳಿಗ್ಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ರೇಣುಕಾಚಾರ್ಯ ಬೆಂಗಳೂರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಸ್ವತಃ ಶಾಸಕ ರೇಣುಕಾಚಾರ್ಯ ತಮ್ಮ ಫೇಸ್ ಬುಕ್ ಹಾಗೂ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ‌ ಬಿ.ಎಸ್.ವೈ ಹೇಳಿದ್ದೇನು..?
ಹೊನ್ನಾಳಿ ಕ್ಷೇತ್ರದ ಜನಪ್ರಿಯ ಶಾಸಕರು, ನನ್ನ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ….ಇದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ.

‘ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ’. ಎಂದು ಅವರು ಹೇಳಿದ್ದಾರೆ.

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಈಗಾಗಾಲೇ ಹತ್ತು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು ಇದೀಗ ಪಾಸಿಟಿವ್ ವರದಿ ಬಂದಿದೆ.

Comments are closed.